ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ #VTU ರಾಜ್ಯಮಟ್ಟದ ಅಂತರ ಕಾಲೇಜು ಪವರ್ ಲಿಫ್ಟಿಂಗ್ 2024-25 ಸ್ಪರ್ಧೆಯಲ್ಲಿ ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್‌ನ #PESTIM ವಿದ್ಯಾರ್ಥಿಗಳ ತಂಡ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ.
ಬೆಂಗಳೂರಿನ ನ್ಯೂ ಹಾರಿಜ಼ನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಆವರಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಸುಮನ್ ಕೆ, ಪವರ್ ಲಿಫ್ಟಿಂಗ್ 105 ವರ್ಗದ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರಿಗೆ ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಆಡಳಿತ ಮಂಡಳಿರವರು, ಹಾಗೂ ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ ಆರ್, ಪ್ರಾಂಶುಪಾಲರಾದ ಡಾ. ಬಿ. ಎನ್. ಯುವರಾಜು ಶುಭ ಹಾರೈಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 












Discussion about this post