ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಜೇನು ಸಾಕಾಣಿಕೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಡಿ.15ರ ಸೋಮವಾರ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ಮೊದಲು ನೋಂದಾಯಿಸಿದ 30 ಜನರಿಗೆ ಮಾತ್ರ ಆದ್ಯತೆ ನೀಡಲಾಗುತ್ತದೆ.
ರೈತರಲ್ಲಿ ಜೇನು ಕೃಷಿ ಕುರಿತಾಗಿ ಪ್ರೋತ್ಸಾಹ ನೀಡುವ ಸಲುವಾಗಿ ಹಾಗೂ ಆಸಕ್ತರಿಗೆ ತರಬೇತಿ ನೀಡುವ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ನಡೆಯಲಿದ್ದು, ಆಸಕ್ತರು ಮೊ.9739916660 ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















