No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಚ್ಚರಿಕೆ ಹಸಿಕಸ, ಒಣಕಸ ವಿಂಗಡಿಸದೇ ಹಾಕಿದ್ದಲ್ಲಿ ಶೀಘ್ರದಲ್ಲೇ ದಂಡ ಗ್ಯಾರೆಂಟಿ

ಶಿವಮೊಗ್ಗ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಿನಿಂದ ಜಾರಿಗೆ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 12, 2019
in ಶಿವಮೊಗ್ಗ
0
Share on FacebookShare on TwitterShare on WhatsApp

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‌ಗಳು ಘನತ್ಯಾಜ್ಯ ನಿರ್ವಹಣೆ ಕುರಿತು ಸಮಗ್ರವಾದ ಬೈಲಾ ಮತ್ತು ಮೈಕ್ರೋ ಪ್ಲಾನ್ ರೂಪಿಸಬೇಕು ಎಂದು ರಾಷ್ಟ್ರೀಯ ಹಸಿರು ಪೀಠದ ಅಧ್ಯಕ್ಷ ನ್ಯಾ.ಸುಭಾಷ್ ಅಡಿ ಅವರು ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತು ರಾಷ್ಟ್ರೀಯ ಹಸಿರು ಪೀಠದ ಆದೇಶಗಳ ಅನುಷ್ಟಾನ ಕುರಿತು ಅಧಿಕಾರಿಗಳ ಸಭೆ ನಡೆಸಿದರು.

ಮನೆ ಮನೆಯಿಂದ ಕಸ ಸಂಗ್ರಹಣೆ, ಮೂಲದಲ್ಲೇ ಹಸಿಕಸ ಮತ್ತು ಒಣಕಸ ಪ್ರತ್ಯೇಕಿಸುವಿಕೆ ಕಾರ್ಯವನ್ನು ಶೇ.100ರಷ್ಟು  ಕಾನೂನು ಪ್ರಕಾರ ಮಾಡಬೇಕಾಗಿದೆ. ಇದಕ್ಕಾಗಿ ಸೂಕ್ತ ಬೈಲಾ ಪ್ರತಿಯೊಂದು ಸ್ಥಳೀಯ ಸಂಸ್ಥೆಗಳು ರೂಪಿಸಬೇಕು. ಕಸ ಸಂಗ್ರಹಣೆ ವಾಹನ, ಮಾನವ ಸಂಪನ್ಮೂಲ, ಕಸ ವಿಲೇವಾರಿ ಘಟಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹೊಂದಿರಬೇಕು. ಎಲ್ಲಾ ಕಸ ಸಂಗ್ರಹಣಾ ವಾಹನಕ್ಕೆ ಜಿಪಿಎಸ್ ಮತ್ತು ಜಿಯೋ ಫೆನ್ಸಿಂಗ್ ಅಳವಡಿಸಬೇಕು. ಪ್ರತಿ ಮನೆಯಲ್ಲಿ ತ್ಯಾಜ್ಯ ಸಂಗ್ರಹಿಸಿರುವ ಕುರಿತು ಖಾತ್ರಿಪಡಿಸಲು ಕಾರ್ಡ್ ಸ್ಕ್ಯಾನಿಂಗ್ ವ್ಯವಸ್ಥೆ ಇರಬೇಕು ಎಂದರು.

ದಂಡ ವಿಧಿಸಿ
ಹಸಿಕಸ ಮತ್ತು ಒಣಕಸ ವಿಂಗಡಿಸದೇ ನೀಡುವ ಮನೆಯವರಿಗೆ ದಂಡ ವಿಧಿಸಲು ಬೈಲಾದಲ್ಲಿ ಕಾನೂನು ರೂಪಿಸಬೇಕು. ಇದೇ ರೀತಿ ಅಂತಹ ವಿಂಗಡಿಸದ ಕಸವನ್ನು ಸಂಗ್ರಹಿಸುವ ಪೌರಕಾರ್ಮಿಕ ಹಾಗೂ ಗುತ್ತಿಗೆದಾರರಿಗೂ ದಂಡ ವಿಧಿಸಲು ಅವಕಾಶವಿರಬೇಕು. ಹಸಿಕಸವನ್ನು ಮನೆಗಳಲ್ಲಿಯೇ ಕಂಪೋಸ್ಟ್‌ ಮಾಡಲು ಉತ್ತೇಜಿಸಬೇಕು. ಪೈಪ್ ಕಂಪೋಸ್ಟ್‌ ಅಳವಡಿಸುವವರಿಗೆ ಪ್ರೋತ್ಸಾಹ ಧನ ನೀಡಬೇಕು. ಹಸಿಕಸವನ್ನು ಪ್ರತಿದಿನ ಹಾಗೂ ಒಣಕಸವನ್ನು ವಾರಕ್ಕೊಮ್ಮೆ ಅಥವಾ ಎರಡು ಬಾರಿ ಸಂಗ್ರಹಿಸಬೇಕು. ಒಣಕಸ ಸಂಗ್ರಹಕ್ಕೆ ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಬೇಕು. ಕಸ ವಿಂಗಡನೆ ಬಗ್ಗೆ ಮನೆಯವರಿಗೆ ಹಾಗೂ ಪೌರಕಾರ್ಮಿಕರಿಗೆ ತರಬೇತಿ ನೀಡಬೇಕು. ಸ್ಯಾನಿಟರಿ ನ್ಯಾಪ್‌ಕಿನ್‌ನಂತಹ ತ್ಯಾಜ್ಯಗಳನ್ನು ವೈದ್ಯಕೀಯ ತ್ಯಾಜ್ಯ ಎಂದು ಪ್ರತ್ಯೇಕ ವಿಭಾಗ ಮಾಡಿ ವಿಲೇವಾರಿಗೆ ನೀಡಬೇಕು. ಹಾಸ್ಟೆಲ್‌ಗಳಲ್ಲಿ ಸಂಗ್ರಹವಾಗುವ ನ್ಯಾಪ್‌ಕಿನ್‌ಗಳನ್ನು ಹಾಗೂ ಪಶುವೈದ್ಯಕೀಯ ಆಸ್ಪತ್ರೆಯ ತ್ಯಾಜ್ಯಗಳನ್ನು ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿಯೇ ಕಟ್ಟುನಿಟ್ಟಿನಿಂದ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.

ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಿ
ಜಿಲ್ಲೆಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಮುಂದಿನ ಒಂದು ತಿಂಗಳ ಒಳಗಾಗಿ ಸಂಪೂರ್ಣ ನಿಷೇಧಿಸಬೇಕು. ಯಾವುದೇ ಕಾರಣಕ್ಕೂ ಹೊಟೇಲ್, ಅಂಗಡಿಗಳು, ವಾಣಿಜ್ಯ ಸಂಸೆಗಳಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲದಂತೆ ಖಾತ್ರಿಪಡಿಸಬೇಕು. ಇದಕ್ಕಾಗಿ ನಿರಂತರ ದಾಳಿ, ದಂಡ ವಿಧಿಸುವಿಕೆ, ಅರಿವು ಮೂಡಿಸುವಿಕೆಯಂತಹ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಗ್ರೀನ್ ಮ್ಯಾರೇಜ್
ಮೈಸೂರಿನಲ್ಲಿ ಕಲ್ಯಾಣ ಮಂಟಪಗಳಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಗ್ರೀನ್ ಮ್ಯಾರೇಜ್ ಪದ್ಧತಿಯನ್ನು ಉತ್ತೇಜಿಸಲಾಗುತ್ತಿದೆ. ಇದೇ ರೀತಿ ಶಿವಮೊಗ್ಗದಲ್ಲಿಯೂ ಆರಂಭಿಸಬೇಕು. ಕಲ್ಯಾಣ ಮಂಟಪಗಳಲ್ಲಿ ಸಂಗ್ರಹವಾಗುವ ಹಸಿಕಸವನ್ನು ಕಡ್ಡಾಯವಾಗಿ ಕಲ್ಯಾಣ ಮಂಟಪದವರೇ ತಮ್ಮ ಪರಿಸರದಲ್ಲಿ ಸೂಕ್ತ ವಿಲೇವಾರಿಗೆ ವ್ಯವಸ್ಥೆ ಮಾಡಬೇಕು. ಈ ಕುರಿತು ಬೈಲಾದಲ್ಲಿ ನಿಯಮ ರೂಪಿಸಬೇಕು. ಕಟ್ಟಡ ನಿರ್ಮಾಣದ ತ್ಯಾಜ್ಯ ವಿಲೇವಾರಿ, ಇತ್ಯಾಜ್ಯ ವಿಲೇವಾರಿಗೆ ಕಾನೂನು ಪ್ರಕಾರ ಸೂಕ್ತ ವ್ಯವಸ್ಥೆ ಮಾಡಬೇಕು. ಶಿವಮೊಗ್ಗ ನಗರದ ಒಳಚರಂಡಿ ಹಾಗೂ ತ್ಯಾಜ್ಯಗಳನ್ನು ನದಿಗೆ ನೇರವಾಗಿ ಬಿಡುತ್ತಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲಾಗಿದೆ. ಹಸಿರು ಪೀಠ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಯಾವುದೇ ಕಾರಣಕ್ಕೂ ನದಿಗೆ ತ್ಯಾಜ್ಯ ನೇರವಾಗಿ ಬಿಡಬಾರದು ಎಂದು ಸೂಚನೆ ನೀಡಿದರು.

ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿನಿತ್ಯ ಒಟ್ಟು 9ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು 293.30 ಟನ್ ಕಸವನ್ನು ಸಂಗ್ರಹಿಸಲಾಗುತ್ತಿದ್ದು, ಇದರಲ್ಲಿ 159.25 ಟನ್ ಕಸವನ್ನು ಘನತ್ಯಾಜ್ಯ ನಿರ್ವಹಣೆ ಮಾರ್ಗಸೂಚಿ ಪ್ರಕಾರ ವಿಲೇವಾರಿ ಮಾಡಲಾಗುತ್ತಿದೆ. ಒಟ್ಟು 185 ವಾರ್ಡ್‌ಗಳಲ್ಲಿ ಕಸವನ್ನು ಮನೆಗಳಿಂದ ಸಂಗ್ರಹಿಸಲಾಗುತ್ತಿದ್ದು, 148 ವಾರ್ಡ್‌ಗಳಲ್ಲಿ ಕಸವನ್ನು ಮೂಲದಲ್ಲಿಯೇ ವಿಂಗಡನೆ ಮಾಡಲಾಗುತ್ತಿದೆ. ವಾಹನ ಖರೀದಿ ಇತ್ಯಾದಿ ಮೂಲಸೌಕರ್ಯ ಕಲ್ಪಿಸಲು 53.21 ಕೋಟಿ ಮೊತ್ತಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದೆ. ಶಿವಮೊಗ್ಗದಲ್ಲಿ 35 ವಾರ್ಡ್‌ಗಳ ಪೈಕಿ 30 ವಾರ್ಡ್‌ಗಳಲ್ಲಿ ಕಸ ನೇರವಾಗಿ ಸಂಗ್ರಹಿಸಲಾಗುತ್ತಿದ್ದು, 6 ವಾರ್ಡ್‌ಗಳಲ್ಲಿ ಮೂಲದಲ್ಲಿಯೇ ವಿಂಗಡನೆ ಮಾಡಲಾಗುತ್ತಿದೆ. ಇನ್ನುಳಿದ ಎಲ್ಲಾ ವಾರ್ಡ್‌ಗಳಲ್ಲಿ ಒಂದುವರೆ ತಿಂಗಳ ಒಳಗಾಗಿ ಮೂಲದಲ್ಲಿಯೇ ಕಸ ವಿಂಗಡನೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಘನತ್ಯಾಜ್ಯ ನಿರ್ವಹಣೆಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ವಿವರ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ, ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಜಿಲ್ಲಾ ಸತ್ರ ನ್ಯಾಯಾಧೀಶ ಮಹಾಸ್ವಾಮಿ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಅಪರ ಜಿಲ್ಲಾಧಿಕಾರಿ ಅನುರಾಧ, ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಾ.ಸುಧೀಂದ್ರ, ಶಿವಮೊಗ್ಗ)

Get In Touch With Us info@kalpa.news Whatsapp: 9481252093

Tags: Dry WasteDrynessGarbage collectionGreen MarriageKannada NewsMalnad NewsPlastic BanShivamoggaWaste Disposal Unitಕಸ ಸಂಗ್ರಹಣೆಗ್ರೀನ್ ಮ್ಯಾರೇಜ್ತ್ಯಾಜ್ಯ ವಿಲೇವಾರಿ ಘಟಕಶಿವಮೊಗ್ಗಹಸಿಕಸ
Share213Tweet123Send
Previous Post

ರಿಪ್ಪನ್’ಪೇಟೆ: ಕೋಲ್ಡ್‌ ಸ್ಟೋರೇಜ್ ಸ್ಥಾಪನೆಗೆ ಭೀಮೇಶ್ವರ ಜೋಷಿ ಶ್ಲಾಘನೆ

Next Post

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

April 1, 2026
ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

April 1, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

April 1, 2026
ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

April 1, 2026
SWR to run special trains for Good Friday, Easter rush

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL