ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಭದ್ರಾ ಯೋಜನೆಯ ಭದ್ರಾ ಬಲದಂಡೆ, ಎಡದಂಡೆ ನಾಲೆಗಳು, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾ ನಾಲೆಗಳಿಗೆ ಜಲಾಶಯದಿಂದ ನೀರನ್ನು ಹರಿಸಲಾಗುತ್ತಿದ್ದು, ಭದ್ರಾ ಜಲಾಶಯದ ಅಚ್ಚುಕಟ್ಟುದಾರರಲ್ಲದ ರೈತರು ಅಕ್ರಮವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರೆತ್ತುವುದು ಕಂಡು ಬಂದಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ನೀರಾವರಿ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದುದೆಂದು ಎಚ್ಚರಿಸಲಾಗಿದೆ.
ಭದ್ರಾ ಜಲಾಶಯದ ಅಚ್ಚುಕಟ್ಟುದಾರರಲ್ಲದ ರೈತರುಗಳು ನಾಲೆಗಳಿಗೆ ಅನಧಿಕೃತವಾಗಿ ವಿದ್ಯುತ್/ಡೀಸೆಲ್ ಪಂಪ್‍ಸೆಟ್ ಹಾಗೂ ಇತರೆ ನೀರೆತ್ತುವ ಉಪಕರಣಗಳನ್ನು ಅಳವಡಿಸಿಕೊಂಡು ನೀರೆತ್ತುತ್ತಿರುವುದರಿಂದ ಅಚ್ಚುಕಟ್ಟು ಕೊನೆಯ ಭಾಗದ ರೈತರುಗಳಿಗೆ ಸಮರ್ಪಕವಾಗಿ ನೀರನ್ನು ಹರಿಸಲು ಸಾಧ್ಯವಾಗುತ್ತಿರುವುದಿಲ್ಲವೆಂದು ತಿಪ್ಪೇರುದ್ರಪ್ಪ ಹಾಗೂ ಇತರರು ದೂರನ್ನು ನೀಡಿದ್ದು, ಉಚ್ಚ ನ್ಯಾಯಾಲಯದ ರಿಟ್ ಅರ್ಜಿಯನ್ವಯ ಪ್ರಕರಣ ದಾಖಲಾಗಿದ್ದು ದಿ: 04-11-2019 ರಂದು ಉಚ್ಚ ನ್ಯಾಯಾಲಯವು ಭದ್ರಾ ಕಾಲುವೆಗಳಲ್ಲಿ ಅನಧಿಕೃತವಾಗಿ ಅಳವಡಿಸಲಾಗಿರುವ ವಿದ್ಯುತ್ ಪಂಪ್‍ಸೆಟ್, ಡೀಸೆಲ್ ಪಂಪ್‍ಸೆಟ್ ಹಾಗೂ ಇತರೆ ನೀರೆತ್ತುವ ಸಲಕರಣೆಗಳನ್ನು ತೆರವುಗೊಳಿಸುವ ಕ್ರಮ ಕೈಗೊಳ್ಳುವಂತೆ ಆದೇಶಿಸಿರುತ್ತದೆ.
ನಾಲೆಗಳಲ್ಲಿ ಪಂಪ್‍ಸೆಟ್‍ಗಳನ್ನು ತೆರವುಗೊಳಿಸದೇ ಇರುವುದರಿಂದ ಅರ್ಜಿದಾರರು ಮತ್ತೊಮ್ಮೆ ಅರ್ಜಿ ಸಲ್ಲಿಸಿರುವನ್ವಯ ಉಚ್ಚ ನ್ಯಾಯಾಲಯದಲ್ಲಿ ದಿ: 05-05-2021 ರಂದು ನ್ಯಾಯಾಂಗ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದ್ದು ದಿನಾಂಕ: 17-05-2021 ರಂದು ಈ ಹಿಂದೆ ಇದ್ದ ಅನಧಿಕೃತ ಪಂಪ್‍ಸೆಟ್‍ಗಳ ತೆರವಿನ ಬಗ್ಗೆ ಘನ ನ್ಯಾಯಾಲಯಕ್ಕೆ ವರದಿಯನ್ನು ಸಹ ಸಲ್ಲಿಸಲಾಗಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post