ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜು/ತರಗತಿ ಒಳಗೆ ಪ್ರವೇಶ ನೀಡದೇ ಇರುವ ಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನಷ್ಟೇ ನಾವು ಪಾಲಿಸುತ್ತಿದ್ದೇವೆ ಎಂದು ಡಿವಿಎಸ್ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಅನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾತನಾಡಿರುವ ಅವರು, ಸ್ವತಂತ್ರ ಹೋರಾಟಗಾರರು ಆರಂಭಿಸಿದ ಶಿಕ್ಷಣ ಸಂಸ್ಥೆ ನಮ್ಮದು. ನಮ್ಮ ಸಂಸ್ಥೆಯಲ್ಲಿ ಈವರೆಗೂ ಯಾವುದೇ ರೀತಿಯ ತಾರತಮ್ಯ ಮಾಡಿಲ್ಲ. ಎಲ್ಲರನ್ನೂ ಒಂದಾಗಿಯೇ ನಾವು ಕಂಡಿದ್ದೇವೆ. ಈ ಹಿಂದೆಯಾದರೂ ನಮ್ಮಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಬಂದಿಲ್ಲ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ನಾವು ಪಾಲಿಸುತ್ತಿದ್ದೇವೆ. ನ್ಯಾಯಾಲಯ ಆದೇಶಕ್ಕೆ ನಾವು ಬದ್ಧವಾಗಿದ್ದೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post