No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂವಿಧಾನದ ಪೀಠಿಕೆಯಂತೆ ನಾವೆಲ್ಲ ನಡೆದುಕೊಳ್ಳಬೇಕು: ಮಲ್ಲಿಕಾರ್ಜುನ ಗೌಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 21, 2022
in ಶಿವಮೊಗ್ಗ
0
ಸಂವಿಧಾನದ ಪೀಠಿಕೆಯಂತೆ ನಾವೆಲ್ಲ ನಡೆದುಕೊಳ್ಳಬೇಕು: ಮಲ್ಲಿಕಾರ್ಜುನ ಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಮ್ಮ ಸಂವಿಧಾನದ ಪೀಠಿಕೆಗೆ ಅರ್ಥ ಬರುವಂತೆ ನಾವೆಲ್ಲಾ ನಡೆದುಕೊಂಡಾಗ ಸಂವಿಧಾನ ರಚನೆಕಾರರ ಕನಸು ನನಸಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ ಹೇಳಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜು, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ದಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ಇಂದು ಕಾನೂನು ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಅರೆಕಾಲಿಕ ಸ್ವಯಂ ಸೇವಕರಿಗೆ ಏರ್ಪಡಿಸಲಾಗಿದ್ದ ಅಭಿಶಿಕ್ಷಣ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
12 ನೇ ಶತಮಾನದಲ್ಲಿ ಬಸವಣ್ಣನವರು ಅಂದು ಪ್ರಚಲಿತದಲ್ಲಿದ್ದ ಅಸಮಾನತೆಯನ್ನು ನಿರ್ಮೂಲನೆ ಮಾಡಲು ಅನುಭವ ಮಂಟಪವನ್ನು ಸ್ಥಾಪಿಸಿ ಸಮಾಜದಲ್ಲಿ ಸಮಾನತೆ ತರಲು ಸಾಕಷ್ಟು ಪ್ರಯತ್ನ ಪಟ್ಟರು. ವಚನಗಳ ಮೂಲಕ ಮನುಕುಲದ ತಿರುಳನ್ನು ಸಾರುವ ಮೂಲಕ ವಚನ ಕ್ರಾಂತಿ ಮತ್ತು ಸಮಾನತೆ ತರಲು ಕಲ್ಯಾಣ ಕ್ರಾಂತಿ ಮಾಡಿದರು. ಅದೇ ಸಮಾನತೆಯ ಉದ್ದೇಶದಿಂದ ಡಾ.ಬಿ.ಆರ್. ಅಂಬೇಡ್ಕರ್ ಅರವರು ಸಾಕಷ್ಟು ಅಧ್ಯಯನ ಮಾಡಿ ನಮ್ಮ ಸಂವಿಧಾನ ರಚಿಸಿದ್ದಾರೆ. ಅದರ ಪೀಠಿಕೆ ಇಡೀ ಸಂವಿಧಾನದ ಧ್ಯೇಯೋದ್ದೇಶ ಮತ್ತು ಆಶೋತ್ತರಗಳನ್ನೆಲ್ಲ ಸವಿಸ್ತಾರವಾಗಿ ತಿಳಿಸುತ್ತದೆ. ಈ ಪೀಠಿಕೆಯಂತೆ ನಾವೆಲ್ಲ ನಡೆದುಕೊಳ್ಳಬೇಕು ಎಂದರು.

ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೆ ಸಮಾನವಾದ ಕಾನೂನಿನ ನೆರವು ನೀಡಲು ಕಾನೂನು ಸೇವೆಗಳ ಪ್ರಾಧಿಕಾರಗಳ ಸ್ಥಾಪನೆಯಾಗಿದೆ. ದುರ್ಬಲರು, ಹಿಂದುಳಿದವರು, ಮಹಿಳೆಯರು, ಮಕ್ಕಳು ಸೇರಿದಂತೆ ಕಾನೂನಿನ ನೆರವು ಅವಶ್ಯಕತೆ ಇರುವವರಿಗೆ ಉಚಿತ ಕಾನೂನು ನೆರವು ಇಲ್ಲಿ ಲಭ್ಯವಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸುವ ವ್ಯವಸ್ಥೆ ಇದೆ. ಇದನ್ನೆಲ್ಲ ಬಳಸಿಕೊಂಡು ತ್ವರಿತ ನ್ಯಾಯ ಪಡೆಯಲು ಎಲ್ಲರೂ ಸಹಕರಿಸಬೇಕು. ಸರ್ಕಾರಿ ಯೋಜನೆಗಳ ಸಮರ್ಪಕ ನಿರ್ವಹಣೆಯಾಗಬೇಕು. ಪ್ರಾಧಿಕಾರದಲ್ಲಿ ಅನೇಕ ಕಾನೂನು ಅರಿವು, ನೆರವು ಕಾರ್ಯಕ್ರಮಗಳಿದ್ದು ಇವು ಯಶಸ್ವಿಯಾಗಲು ಪಿಎಲ್‍ವಿ ಗಳು ಸಹಕರಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸಿ.ಬಿ.ಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೊ.ಜಿ.ಆರ್.ಜಗದೀಶ್ ಮಾತನಾಡಿ, ಪ್ರತಿ ಶ್ರೀಸಾಮಾನ್ಯನಿಗೆ ಕಾನೂನು ಸೇವಕನ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ನ್ಯಾಯ ಒದಗಿಸುವಲ್ಲಿ ಕಾನೂನು ವಿದ್ಯಾರ್ಥಿಗಳ ಪಾತ್ರವಿದೆ. ಈ ಸಮಾಜವೇ ಅವರಿಗೆ ಪ್ರಯೋಗಶಾಲೆಯಾದ್ದರಿಂದ ಪ್ರತಿ ಕಾನೂನಿನ ವಿದ್ಯಾರ್ಥಿಗಳು ನಮ್ಮ ಸಂವಿಧಾನ ಮತ್ತು ಮೂಲಭೂತ ಕಾನೂನುಗಳ ಅಧ್ಯಯನ ಮಾಡಿ, ಕಾನೂನಿನ ಅರಿವು ಮತ್ತು ನೆರವು ನೀಡುವಲ್ಲಿ ಪಾಲ್ಗೊಳ್ಳಬೇಕೆಂದರು.

ಈ ದಿಸೆಯಲ್ಲಿ ನಮ್ಮ ಕಾಲೇಜಿನ ವತಿಯಿಂದ 1991 ರಿಂದಲೇ ಹಳ್ಳಿಗಳಲ್ಲಿ ಕಾನೂನು ಅರಿವು ಶಿಬಿರಗಳನ್ನು ಆಯೋಜಿಸುತ್ತಾ ಬಂದಿದ್ದು, ನ್ಯಾಯಾಧೀಶರನ್ನು ಕರೆಯಿಸಿ ಗ್ರಾಮಸ್ಥರ ಪ್ರಶ್ನಾವಳಿಗಳಿಗೆ ಉತ್ತರಿಸಲಾಗಿದೆ. ವಿದ್ಯಾರ್ಥಿಗಳು, ಪಿಎಲ್‍ವಿ(ಪ್ಯಾರಾ ಲೀಗಲ್ ವಾಲಂಟೀಯರ್ಸ್) ಕೇವಲ ನಾಲ್ಕು ಗೋಡೆ ಮಧ್ಯ ಮಾತ್ರವಲ್ಲ, ಹಳ್ಳಿಗಳಲ್ಲಿ ಸೋಷಿಯೋ-ಲೀಗಲ್ ಸರ್ವೇ ಮಾಡಿ, ಜನಸಾಮಾನ್ಯರ ದೈನಿಂದನ ಕಾನೂನಿನ ಸಮಸ್ಯೆಗಳ ಕುರಿತು ತಿಳಿಸುತ್ತಾ ಬಂದಿದ್ದು, ಇದರಿಂದ ಅನುಭವದ ಮುಖೇನ ಕಾನೂನು ತಿಳಿಯಲು ಸಹಕಾರಿಯಾಗಿದೆ ಎಂದರು.
ಕಾನೂನು ಸೇವೆಗಳ ಪ್ರಾಧಿಕಾರ ಜಾರಿಗೆ ಬಂದಾಗಿನಿಂದ ಕಾನೂನಿನ ವಿದ್ಯಾರ್ಥಿಗಳೂ ಸಹ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಕಾನೂನಿನ ಅರಿವು ಮೂಡಿಸುತ್ತಾ ತಾವೂ ಕಲಿಯುತ್ತಿದ್ದಾರೆ. ನಮ್ಮ ನೆಲದ ಕಾನೂನಾದ ಸಂವಿಧಾನವನ್ನು ನಾವೆಲ್ಲರೂ ಉತ್ತಮವಾಗಿ ಜಾರಿಗೊಳಿಸುತ್ತಾ ಸಾಮಾಜಿಕ, ಆರ್ಥಿಕ ಸೇರಿದಂತೆ ಎಲ್ಲ ರೀತಿಯ ಸಮಾನತೆಯನ್ನು ಈ ನೆಲದಲ್ಲಿ ತರಲು ಶ್ರಮಿಸೋಣ ಎಂದರು.

Also read: ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ: ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಬಿ.ವೈ. ವಿಜಯೇಂದ್ರ

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ಮಾತನಾಡಿ, ಎಲ್ಲರಿಗೂ ಕಾನೂನಿನ ಅರಿವು ಮೂಡಿಸಿ ಇದರ ಮಹತ್ವ ತಿಳಿಸುವುದು ಕಾನೂನು ಸೇವಾ ಪ್ರಾಧಿಕಾರದ ಅತ್ಯುನ್ನತ ಉದ್ದೇಶವಾಗಿದೆ. ಕಾನೂನಿನ ಅರಿವಿಲ್ಲದೇ ಸಾಕಷ್ಟು ಜನರು ತಪ್ಪು ಮಾಡಿ ಜೈಲು ಸೇರುತ್ತಿದ್ದಾರೆ. ಇದು ದೇಶದ ಏಳ್ಗೆಗೆ ಮಾರಕವೆಂದರಿತು ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾನೂನು ಸೇವಾ ಪ್ರಾಧಿಕಾರಗಳನ್ನು ಸ್ಥಾಪಿಸಿ ಹಳ್ಳಿ ಹಳ್ಳಿಗಳಲ್ಲಿ ಕಾನೂನಿನ ಅರಿವು ಮೂಡಿಸಲಾಗುತ್ತಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕೆಂದರು.
ಸಿ.ಬಿ.ಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಬಿ.ಸಿ.ಬಸಪ್ಪ ಹಾಗೂ ಡಾ.ಎ. ಅನಲ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಶಿಬಿರಾರ್ಥಿಗಳಿಗೆ ಸಂವಿಧಾನ ಮತ್ತು ಇತರೆ ಕಾನೂನುಗಳ ಕುರಿತು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್, ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ದಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‍ನ ನಿರ್ದೇಶಕರು ಹಾಗೂ ವಕೀಲ ಕೆ.ಸಿ ಬಸವರಾಜಪ್ಪ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ: ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಬಿ.ವೈ. ವಿಜಯೇಂದ್ರ

Next Post

ಸೆ.23ರಂದು ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೆ.23ರಂದು ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

ಸೆ.23ರಂದು ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL