No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾವೆಲ್ಲರೂ ರಾಮನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಸಚಿವ ಮಧು ಬಂಗಾರಪ್ಪ

kalpa News by kalpa News
October 28, 2023
in ಶಿವಮೊಗ್ಗ
0
ನಾವೆಲ್ಲರೂ ರಾಮನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮಹರ್ಷಿ ವಾಲ್ಮೀಕಿಯವರು ದೂರದೃಷ್ಟಿ ಉಳ್ಳವರಾಗಿದ್ದು ಅವರು ರಚಿಸಿರುವ ಮಹಾಕಾವ್ಯ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ ಎಂದು ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Minister Madhu Bangarappa ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾವೆಲ್ಲರೂ ರಾಮನನ್ನು ಸ್ಮರಿಸುತ್ತೇವೆ. ಕೇವಲ ರಾಮ ರಾಮ ಎಂದರೆ ಸಾಲದು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ರಾಮನ ಆದರ್ಶಗಳು, ಸೀತೆಯ ತಾಳ್ಮೆ, ಭರತನ ನಂಬಿಕೆ-ವಿಶ್ವಾಸ, ಹನುಮಂತನ ಭಕ್ತಿ ಹೀಗೆ ಒಂದೊಂದು ಉತ್ತಮ ಅಂಶಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದರು.

ಕುಲ ಕಸುಬು ಬೇಟೆಯಾದರೂ ವಾಲ್ಮೀಕಿಯವರು ಸರ್ವಶ್ರೇಷ್ಟವಾದ ಮಹಾಕಾವ್ಯ ರಾಮಾಯಣ ರಚಿಸಿದ್ದಾರೆ. ಇಂತಹ ಪುಣ್ಯ ವ್ಯಕ್ತಿಯನ್ನು ನಾವು ಹೊಂದಿರುವುದು ನಮ್ಮ ಭಾಗ್ಯ. ರಾಷ್ಟ್ರಕವಿ ಕುವೆಂಪು ರವರು ಸಹ ವಾಲ್ಮೀಕಿಯವರಿಂದ ಸ್ಪೂರ್ತಿ ಪಡೆದಿದ್ದಾರೆ. ಅನೇಕ ಕವಿಗಳು ಅವರಿಂದ ಸ್ಪೂರ್ತಿ ಪಡೆದು ಕಾವ್ಯ ರಚಿಸಿದ್ದಾರೆ. ರಾಮಾಯಣ ಇಂದಿಗೆ ಅತ್ಯಂತ ಪ್ರಸ್ತುತವಾಗಿದೆ. ಅಲ್ಲಿ ನಾವು ಕಾಣುವ ತಾಳ್ಮೆ, ಭ್ರಾತೃತ್ವ, ಗೌರವ, ನಂಬಿಕೆ, ವಿಶ್ವಾಸ, ಭಕ್ತಿ ಹೀಗೆ ಎಲ್ಲ ಅಂಶಗಳು ನಮಗೆ ಬೇಕು. ಆ ಎಲ್ಲ ಅಂಶಗಳನ್ನು ನಾವು ಅಳವಡಿಸಿಕೊಂಡು ಸೌಹಾರ್ಧತೆ ಮತ್ತು ಶಾಂತಿಯಿಂದ ಬಾಳೋಣ. ಹೆತ್ತ ತಂದೆ-ತಾಯಿಯನ್ನು ಗೌರವದಿಂದ ನಡೆಸಿಕೊಂಡು ಪೂಜಿಸೋಣ ಎಂದು ಹೇಳಿದರು.

ನವೆಂಬರ್ 8 ರಂದು ನಗರದ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು, ಉದ್ಯೋಗಾಕಾಂಕ್ಷಿಗಳು, ಯುವಜನತೆ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆಯಬೇಕು. ಹಾಗೂ ಜನರ ಮನೆ ಬಾಗಿಲಿಗೆ ಬಂದು ಅಹವಾಲು ಸ್ವೀಕರಿಸುವ ಜನತಾ ದರ್ಶನವನ್ನು ಅಧಿಕಾರಿಗಳು ಕ್ಷೇತ್ರವಾರು ನಡೆಸಲಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆಯಬೇಕು.

ಎಸ್. ಮಧು ಬಂಗಾರಪ, ಜಿಲ್ಲಾ ಉಸ್ತುವಾರಿ ಸಚಿವರು

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಎಸ್.ಎಂ.ಮುತ್ತಯ್ಯ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಹರ್ಷಿ ವಾಲ್ಮೀಕಿಯವರ ವೈಯಕ್ತಿಕ ಜೀವನದ ಕುರಿತು ಹುಡುಕಾಟದ ಪ್ರಯತ್ನ ಹೆಚ್ಚಾಗಬೇಕು. ಅವರ ಜೀವನದ ಮಾಹಿತಿಗಿಂತ ರಾಮಾಯಣದ ಕುರಿತು ಹೆಚ್ಚಾಗಿ ತಿಳಿದಿದ್ದೇವೆ. ವಿದ್ಯಾರ್ಥಿಗಳು ಅವರ ಇತಿಹಾಸದ ಕುರಿತು ಹುಟುಕಾಟ ಮಾಡಬೇಕಾದ ಅಗತ್ಯವಿದೆ.
ಆಗ ವಾಲ್ಮೀಕಿಯವರ ಜೀವನದ ನಂಬಲರ್ಹವಲ್ಲದ ಕೆಲವು ಕಥೆಗಳನ್ನು ಪ್ರಶ್ನಿಸಲು ಸಾಧ್ಯವಗುತ್ತದೆ. ಈಗಾಗಲೇ ಈ ಪ್ರಶ್ನೆ ಮಾಡಲಾಗುತ್ತಿದೆ. ಇತಿಹಾಸಪೂರ್ವ ಕಾಲದ ಚರಿತ್ರೆಯಯನ್ನು ಕಾವ್ಯಗಳ ಮೂಲಕ ಕಟ್ಟಿಕೊಟ್ಟ ಇವರನ್ನು ಮೊದಲ ಇತಿಹಾಸಕಾರ ಅನ್ನಿಸಿಕೊಳ್ಳುತ್ತಾರೆ. ಇವರ ಕಾವ್ಯಗಳು ಜೀವನದ ಎಲ್ಲ ಆಯಾಮಗಳನ್ನು ಒಳಗೊಂಡಿದ್ದು, ಯುವಜನತೆ ಈ ಬಗ್ಗೆ ಆಸಕ್ತಿ ವಹಿಸಬೇಕೆಂದರು.

Also read: ಶಿವಮೊಗ್ಗ ಏರ್ ಪೋರ್ಟ್’ನಲ್ಲಿ ಶೀಘ್ರ ನೈಟ್ ಲ್ಯಾಂಡಿಂಗ್ | ಬಾಂಬ್ ನಿಷ್ಕ್ರಿಯ ತಂಡ ನಿಯೋಜನೆಗೆ ಮನವಿ

ಮೊದಲಿಗೆ ಹಾಡುಗಾರಿಕೆಯಿಂದ ಶುರುವಾದ ವಾಲ್ಮೀಕಿಯವರ ಕಾಯಕ ಎಲ್ಲ ಜನರಿಗೆ ಅನ್ವಯಿಸುವ ಮೌಲ್ಯಗಳನ್ನೊಳಗೊಂಡ ರಾಮಾಯಣ ಮಹಾಕಾವ್ಯ ರಚನೆವರೆಗೆ ಸಾಗಿತು. ಕೇವಲ ರಾಮಾಯಣ ಮಾತ್ರವಲ್ಲ್ಲ ಇನ್ನೂ ಹಲವು ಕೃತಿ ರಚಿಸಿದ್ದಾರೆಂದು ತಿಳಿದು ಬಂದಿದೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

ಶಾಸಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಬ್ಬ ವ್ಯಕ್ತಿ ಜೀವನದಲ್ಲಿ ಹೇಗಿರಬೇಕು ಎಂಬುದನ್ನು ಮಹರ್ಷಿ ವಾಲ್ಮೀಕಿಯವರು ರಾಮಾಯಣದ ಮೂಲಕ ತೋರಿಸಿಕೊಟ್ಟಿದ್ದಾರೆ. ವಾಲ್ಮೀಕಿಯವರು ಒಂದು ಸಮಾಜಕ್ಕೆ ಮಾತ್ರ ಸೀಮಿತವಾದವರಲ್ಲ. ಅವರೊಬ್ಬ ರಾಷ್ಟ್ರಪುರುಷ. ಸರ್ವಸ್ಪರ್ಶಿ.

ಎಲ್ಲವನ್ನು ಅವಲೋಕಿಸಿದಾಗ ಸತ್ಯದ ಹೂರಣ ಹೊರಗೆ ಬರುತ್ತದೆ. ಹಾಗೆ ವಾಲ್ಮೀಕಿಯವರು ಎಲ್ಲವನ್ನು ಅವಲೋಕಿಸಿ ರಾಮಾಯಣವನ್ನು ನಮಗೆ ನೀಡಿದ್ದು ರಾಮನ ಆದರ್ಶ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕು. ನಾವೆಲ್ಲ ಆದರ್ಶ ಪುರುಷರಾದಾಗ ಮಾತ್ರ ದೇಶ ಉದ್ದಾರ ಆಗುತ್ತದೆ.
ನಮ್ಮದು ಶ್ರೇಷ್ಟ ಸಾಂಸ್ಕøತಿಕ ದೇಶ. ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಿರುವ ದೇಶ. ರಾಮ ಭಜನೆ ನಮ್ಮ ಭಕ್ತಿ. ಅಯೋಧ್ಯೆಯಲ್ಲಿ ಬರುವ ಜ.22 ರಂದು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವಿದ್ದು ಇದು ಒಂದು ದೇವಸ್ಥಾನವಲ್ಲ ಬದಲಾಗಿ ರಾಷ್ಟ್ರ ಮಂದಿರ ಎಂದರು.

ಶಾಸಕರಾದ ಶಾರದಾ ಪೂರ್ಯನಾಯ್ಕ ಮಾತನಾಡಿ, ಮಹರ್ಷಿ ವಾಲ್ಮೀಕಿಯವರು ಆದಿಕವಿಯಾಗಿದ್ದು ಎಲ್ಲ ಸಮಾಜಕ್ಕೆ ಮಾದರಿಯಾದ ಮಹಾಕಾವ್ಯ ರಾಮಾಯಣವನ್ನು ರಚಿಸಿದ್ದಾರೆ. ಮರ್ಯಾದ ಪುರಷ ರಾಮನ ಆದರ್ಶಗಳನ್ನು ನಾವೆಲ್ಲ ಅಳವಡಿಸಿಕೊಳ್ಳೋಣ. ಎಲ್ಲ ಮನುಷ್ಯರೂ ಒಂದೇ. ಎಲ್ಲರನ್ನು ಪ್ರೀತಿಸಿ, ಗೌರವದಿಂದ ಕಾಣಬೇಕೆಂದು ಈ ಮಹಾಕಾವ್ಯ ತೋರಿಸಿದೆ. ಈ ನಿಟ್ಟಿನಲ್ಲಿ ನಾವೆಲ್ಲ ಬದುಕೋಣ ಎಂದರು.

ಬೆಳಿಗ್ಗೆ ಸೈನ್ಸ್ ಮೈದಾನದಿಂದ ಹೊರಟ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡೆಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಶಸ್ತಿ ಬಹುಮಾನ ಹಾಗೂ ಅಂತರ್ಜಾತೀಯ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾನ ಧನ ವಿತರಿಸಲಾಯಿತು.

ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಆರ್,  ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಎಎಸ್‍ಪಿ ಅನಿಲ್ ಕುಮಾರ್ ಭೂಮರೆಡ್ಡಿ, ವಾಲ್ಮೀಕಿ ಸಮಾಜದ ಮುಖಂಡರಾದ ಎಸ್.ವಿ.ರಾಜು, ಲಕ್ಷ್ಮಣಪ್ಪ, ಬಿ.ಎಸ್. ನಾಗರಾಜ್, ರಾಜು, ಮಂಜಪ್ಪ ಇತರೆ ಮುಖಂಡರು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್. ಜಿ. ಶ್ರೀನಿವಾಸ್ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು,
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಏರ್ ಪೋರ್ಟ್’ನಲ್ಲಿ ಶೀಘ್ರ ನೈಟ್ ಲ್ಯಾಂಡಿಂಗ್ | ಬಾಂಬ್ ನಿಷ್ಕ್ರಿಯ ತಂಡ ನಿಯೋಜನೆಗೆ ಮನವಿ

Next Post

ಏಷ್ಯನ್ ಪ್ಯಾರಾ ಗೇಮ್ಸ್: ಶಿವಮೊಗ್ಗದ ಸುಹಾಸ್‌ಗೆ ಚಿನ್ನದ ಪದಕ

kalpa News

kalpa News

Next Post
ಏಷ್ಯನ್ ಪ್ಯಾರಾ ಗೇಮ್ಸ್: ಶಿವಮೊಗ್ಗದ ಸುಹಾಸ್‌ಗೆ ಚಿನ್ನದ ಪದಕ

ಏಷ್ಯನ್ ಪ್ಯಾರಾ ಗೇಮ್ಸ್: ಶಿವಮೊಗ್ಗದ ಸುಹಾಸ್‌ಗೆ ಚಿನ್ನದ ಪದಕ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL