No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜದತ್ತ ನಮ್ಮ ಹೊಣೆಗಾರಿಕೆಯನ್ನು ಮರೆಯಬಾರದು | ಬ್ರಜೇಶ್ ಸಿಂಗ್

ಜೆಎನ್'ಎನ್'ಸಿಇ | ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ 'ಪವರ್ ಮೀಟ್'

kalpa News by kalpa News
April 25, 2026
in ಶಿವಮೊಗ್ಗ
0
ಸಮಾಜದತ್ತ ನಮ್ಮ ಹೊಣೆಗಾರಿಕೆಯನ್ನು ಮರೆಯಬಾರದು | ಬ್ರಜೇಶ್ ಸಿಂಗ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ‌ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು.

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ #JNNCE ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’ #PowerMeet ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Also Read>> ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ

ಕನೆಕ್ಟಿಂಗ್ ಡಾಟ್ಸ್ ಎಂಬ ಎನ್‌ಜಿಒ #NGO ಮೂಲಕ ನೂರಾರು ಕುಟುಂಬಗಳಿಗೆ ನಿರಂತರ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ‌. ಜನರ ಸಮಸ್ಯೆ ಬಗ್ಗೆ ಸ್ಥಳೀಯ ಆಡಳಿತದ ಗಮನಕ್ಕೆ ತಂದಾಗ, ಎಲ್ಲವೂ ದಾಖಲೆಗಳಲ್ಲಿ ಸರಿಯಾಗಿದೆ ಎಂಬ ಉತ್ತರಗಳು ಬಂದವು. ಆದರೆ ವಾಸ್ತವದಲ್ಲಿ ಏನೂ ಸರಿಯಾಗಿರಲಿಲ್ಲ. ನೀತಿಗಳು ಉತ್ತಮವಾಗಿದ್ದರೂ, ಅವುಗಳ ಅನುಷ್ಠಾನದಲ್ಲಿ ಕೊರತೆ ಇಂದಿನ ಸಮಾಜದಲ್ಲಿ ಎದ್ದು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಸಮಾಜದತ್ತ ನಮ್ಮ ಬದ್ಧತೆಯನ್ನು ತೋರಿಸಬೇಕಿದೆ ಎಂದು ಹೇಳಿದರು.ನವದೆಹಲಿಯ ಇನ್ನೊಗ್ರೆಸ್ ಕಂಪನಿ ಸ್ಥಾಪಕ ಸುಮಂತ್ ಪರಿಮಳ್ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಅಧ್ಯಯನಕ್ಕೆ ಸೀಮಿತವಾಗದೆ, ನಮ್ಮದೇ ಕನಸುಗಳನ್ನು ನಿರ್ಮಿಸಿಕೊಳ್ಳಿ. ಇಂದಿನ ಜಾಗತಿಕ ಪರಿಸ್ಥಿತಿಯಲ್ಲಿ ದೊಡ್ಡ ಬದಲಾವಣೆಗಳು ನಡೆಯುತ್ತಿವೆ. ಭಾರತವು ಜಾಗತಿಕ ವೇದಿಕೆಯಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.

ನಮ್ಮ ಬುದ್ಧಿಶಕ್ತಿಯು #Robotics ರೋಬೋಟಿಕ್ಸ್ ಮತ್ತು ಎಐ ವ್ಯವಸ್ಥೆಗಳೊಂದಿಗೆ ಒಂದಾಗುತ್ತಿದೆ. ಅವುಗಳು ನಮ್ಮ ಪರವಾಗಿ ಕೆಲಸ ಮಾಡುವ ಮಟ್ಟಕ್ಕೆ ತಂತ್ರಜ್ಞಾನ ಬೆಳೆಯುತ್ತಿದೆ. ಎಐ ಎಂಬುದು ಬುದ್ದಿ ಮತ್ತು ವಿದ್ಯುತ್ ಶಕ್ತಿಯ ಮೇಲೆ ಅವಲಂಬಿತವಾಗಿದೆ. ವಾಸ್ತವದಲ್ಲಿ ಕೇವಲ ಕಂಪ್ಯೂಟ್ ಪವರ್ ಬಗ್ಗೆ ಮಾತ್ರವಲ್ಲ, ನಿಜವಾದ ವಿದ್ಯುತ್ ಶಕ್ತಿಯನ್ನು ಎಲ್ಲಿಂದ ಪಡೆಯುವುದು ಎಂಬುದರ ಬಗ್ಗೆಯು ಚಿಂತಿಸಬೇಕಿದೆ.

ಅದಕ್ಕಾಗಿ ಹಸಿರು ಶಕ್ತಿಯ ಮೂಲಗಳಿಂದ ವಿದ್ಯುತ್ ಪಡೆಯುವಂತೆ ‘ಗ್ರೀನ್ ಡೇಟಾ ಸೆಂಟರ್‌ಗಳು’ #GreenDataCenter ಸ್ಥಾಪಿಸಲು ಯೋಜನೆಗಳು ಸಿದ್ಧವಾಗುತ್ತಿವೆ. ಸೌರಶಕ್ತಿ ಮತ್ತು ಹೈಡ್ರೋಜನ್ ಆಧಾರಿತ ಶಕ್ತಿ ವ್ಯವಸ್ಥೆಗಳಲ್ಲಿ ಭಾರಿ ಹೂಡಿಕೆಗಳು ನಡೆಯುತ್ತಿವೆ. ಭವಿಷ್ಯದ ಸಂಪೂರ್ಣ ತಂತ್ರಜ್ಞಾನವು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಶಕ್ತಿಯ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಮಾತನಾಡಿ, ವಿಭಾಗ ಮಟ್ಟದಲ್ಲಿ ಹಿರಿಯ ಕಿರಿಯ ವಿದ್ಯಾರ್ಥಿಗಳು ಒಂದೆಡೆ ಸೇರಿಸುವ ಎನ್ಇಎಸ್ ಸಂಸ್ಥೆಯ ಆಶಯ ಯಶಸ್ವಿಯಾಗಿದ್ದು, ಜ್ಞಾನ ಹಂಚಿಕೆಯ ಪ್ರಕ್ರಿಯೆ ಸಫಲಗೊಂಡಿದೆ. ಮನಸ್ಸಿನೊಂದಿಗೆ ಹುಟ್ಟಿದ ಸಂಬಂಧ ನಮ್ಮಲ್ಲಿ ಸದಾ ಕಾಲ ಉಳಿಯುತ್ತದೆ. ಸಂಸ್ಕಾರಯುತ ಶಿಕ್ಷಣಕ್ಕೆ ಎನ್ಇಎಸ್ ಸದಾ ಒತ್ತು ನೀಡುತ್ತಿದೆ ಎಂದು ಹೇಳಿದರು.‌Also Read>> ಜೋಕಾಲಿ ಆಡುವಾಗ ಕುಣಿಕೆ ಬಿಗಿದು ಬಾಲಕಿ ಸಾವು

ಪ್ರೇರಣೆ ನೀಡಿದ ಹಿರಿಯ ವಿದ್ಯಾರ್ಥಿಗಳ ಯಶೋಗಾಥೆ
ಪ್ರತಿಷ್ಠಿತ ಉದ್ಯಮಿಗಳಾಗಿ, ಕಲಾವಿದರಾಗಿ, ಅಭಿಯಂತರರಾಗಿ, ಮೆಸ್ಕಾಂ ಬೆಸ್ಕಾಂ ಸೇರಿದಂತೆ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಉನ್ನತ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ನೂರಾರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಹಾದಿಯ ದುರ್ಗಮತೆಯನ್ನು ಕಿರಿಯ ವಿದ್ಯಾರ್ಥಿಗಳ ಮುಂದೆ ಹಂಚಿಕೊಂಡರು. ಅನೇಕ ಉದ್ಯೋಗವಕಾಶ ಕೋರಿದ ಅರ್ಜಿಗಳು, ಸಂವಹನ ಮತ್ತು ಸೃಜನಾತ್ಮಕ ಕೌಶಲ್ಯಗಳ ಕೊರತೆಯಿಂದ ತಿರಸ್ಕೃತವಾಗುತ್ತವೆ. ಉದ್ಯೋಗ ನೀಡುವ ಸಂಸ್ಥೆ ಕೇವಲ ಅಂಕಗಳನ್ನು ಮಾತ್ರ ಪರಿಗಣಿಸುವುದಿಲ್ಲ; ಒಟ್ಟಾರೆ ಸಾಮರ್ಥ್ಯವನ್ನು ಗಮನಿಸುತ್ತವೆ. ಸಂವಹನ ಕೌಶಲ್ಯತೆ ಎಂಬುದು ದೊಡ್ಡ ಮಟ್ಟದ ಪ್ರಭಾವ ಬೀರುತ್ತದೆ. ಜೊತೆಯಲ್ಲಿ ಪ್ರಾದೇಶಿಕ ಭಾಷೆಗಳ ಪ್ರೌಢಿಮೆಯು ಅತ್ಯಂತ ಅಗತ್ಯವಾಗಿದೆ ಎಂದು ಸಲಹೆ ನೀಡಿದರು.

ಎನ್ಇಎಸ್ ನಿರ್ದೇಶಕರಾದ ಟಿ.ಆರ್‌.ಅಶ್ವಥನಾರಾಯಣ ಶೆಟ್ಟಿ, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಎಚ್.ಬಿ.ಸುರೇಶ್, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಬಸಪ್ಪಾಜಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: #GreenDataCenterJNNCEKannada News WebsiteLatest News KannadaRoboticsShimogaShivamoggaShivamogga Newsಇನ್ನೊಗ್ರೆಸ್ ಕಂಪನಿಜೆಎನ್’ಎನ್’ಸಿಇನವದೆಹಲಿಬ್ರಜೇಶ್ ಸಿಂಗ್ಯುನಿವರ್ಸಲ್ ಟೆಕ್ನಾಲಜಿರೋಬೋಟಿಕ್ಸ್ಶಿವಮೊಗ್ಗಸಿಂಗಾಪುರಹಸಿರು ಶಕ್ತಿ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ

Next Post

ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

kalpa News

kalpa News

Next Post
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL