ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಏ.24 ಮತ್ತು 25ರಂದು ವಾರಾಂತ್ಯದ ಕರ್ಫ್ಯೂ ಉಲ್ಲಂಘನೆ ಮಾಡಿದ ಯಾವುದೇ ಪ್ರಮುಖ ಪ್ರಕರಣಗಳು ದಾಖಲಾಗಿರುವುದಿಲ್ಲ ಹಾಗೂ ಕರ್ಫ್ಯೂಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮತ್ತು ಸಹಕಾರ ದೊರಕಿದೆ ಎಂದು ತಿಳಿದುಬಂದಿದೆ.
ನಗರದಲ್ಲಿ 24ರಂದು ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ 9 ಹಾಗೂ 25ರಂದು 49 ವಾಹನಗಳನ್ನು ಸ್ವಾಧೀನ ಪಡಿಸಿಕೊಂಡು, ಐಎಮ್ವಿ ಕಾಯ್ದೆ ಅಡಿಯಲ್ಲಿ 172 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 82,800ರೂ. ದಂಡವನ್ನು ವಿಧಿಸಲಾಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post