ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಮಾಜಮುಖಿ ಕಾರ್ಯಕ್ಕೆ ಸುಶಿಕ್ಷಿತ ಯುವ ಸಮೂಹ ತೆರೆದುಕೊಳ್ಳುವ ಮೂಲಕ ದೇಶದ ಆಶಾಕಿರಣವಾಗಿ ಪ್ರಜ್ಚಲಿಸಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಕರೆ ನೀಡಿದರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಶುಕ್ರವಾರ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ #Independence Day ಕಾರ್ಯಕ್ರಮದಲ್ಲಿ ಧ್ವಜಾರೋಹಣ ಗೊಳಿಸಿ ಮಾತನಾಡಿದರು.

ಭಾರತ ಸ್ವಾತಂತ್ರಗೊಂಡ ಸಂದರ್ಭದಿಂದ ಇಲ್ಲಿಯವರೆಗೆ ಜನಸಂಖ್ಯೆ ಎಂಬುದು ಮೂರು ಪಟ್ಟು ಹೆಚ್ಚಾಗಿದೆ. ಸಮಾಜದ ಸುಸ್ಥಿರ ಬೆಳವಣಿಗೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಪ್ರಮುಖ ಪಾತ್ರ ವಹಿಸಿದೆ. ಈ ಹಿನ್ನಲೆಯಲ್ಲಿ ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸಿದ್ದರು ಕೂಡ, ಸಾಮಾನ್ಯ ಜನರಿಗೆ ಯೋಜನೆಗಳ ಫಲ ತಲುಪುವಲ್ಲಿ ಇಂದಿಗೂ ಸವಾಲುಗಳಿವೆ. ಸುಶಿಕ್ಷಿತ ಸಮಾಜ ಅಂತಹ ಸವಾಲುಗಳನ್ನು ಎದುರಿಸುವ ಕಾರ್ಯಕ್ಕೆ, ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ಕೆ ಸಜ್ಜಾಗಲಿ.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಹೆಚ್.ಸಿ.ಶಿವಕುಮಾರ್, ಮಧುರಾವ್, ಆಜೀವ ಸದಸ್ಯರಾದ ಗೋವಿಂದರಾಜ್, ಜಗದೀಶ್, ಆನಂದ, ಗುರುಪ್ರಸಾದ್, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ ಸೇರಿದಂತೆ ವಿವಿಧ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post