ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರದಲ್ಲಿ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಹಿಂದೆ ಸರ್ಕಾರ ನೀಡಿದ ಮಾರ್ಗಸೂಚಿಯ ಸಡಿಲಿಕೆಯನ್ನು ಬದಲಾವಣೆ ಮಾಡಿ ಶಿವಮೊಗ್ಗ ಮಹಾನಗರ ಪಾಲಿಕೆ ಮರು ಆದೇಶ ಹೊರಡಿಸಿದೆ.
ಬದಲಾವಣಾ ಮಾರ್ಗಸೂಚಿ ಹೀಗಿದೆ.
*ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಸಮಾರಂಭಗಳಲ್ಲಿ ಕಡ್ಡಾಯವಾಗಿ 3.25 ಅಡಿ ಅಂತರ ಕಾಯ್ದುಕೊಳ್ಳುವುದು.
*ಮದುವೆ ಸಮಾರಂಭಗಳಲ್ಲಿ ತೆರೆದ ಪ್ರದೇಶದಲ್ಲಿ ೫೦೦ ಜನ ಮೀರುವಂತಿಲ್ಲ. ಸಭಾಂಗಣ/ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶದಲ್ಲಿ 200 ಜನ ಮೀರದಂತೆ ನೋಡಿಕೊಳ್ಳುವುದು.
*ಜನ್ಮದಿನ ಹಾಗೂ ಇತರ ಆಚರಣೆ ಸಂದರ್ಭದಲ್ಲಿ ತೆರೆದ ಪ್ರದೇಶದಲ್ಲಿ ೧೦೦ಜನ ಮೀರದಂತೆ, ಸಭಾಂಗಣ/ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 50ಜನ ಮೀರದಂತೆ ಜಾಗ್ರತೆ ವಹಿಸುವುದು.
*ನಿಧನ/ಶವಸಂಸ್ಕಾರ ಸಂದರ್ಭದಲ್ಲಿ ತೆರೆದ ಪ್ರದೇಶದಲ್ಲಿ 100 ಜನ ಮೀರದಂತೆ, ಸಭಾಂಗಣ/ಹಾಲ್ ಇತರೆ ಮುಚ್ಚಿದ ಪ್ರದೇಶದಲ್ಲಿ 50ಜನ ಮೀರದಂತೆ ಇರಬೇಕು.
*ಅಂತ್ಯಕ್ರಿಯೆ ಸಂದರ್ಭದಲ್ಲಿ 50ಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳುವಂತಿಲ್ಲ. ಇತರೆ ಸಮಾರಂಭಗಳಲ್ಲಿ ಹಾಲ್‌ನ ವಿಸ್ತೀರ್ಣಕ್ಕೆ ಅನುಗುಣವಾಗಿ 100 ಜನ ಮೀರದಂತೆ ಎಚ್ಚರಿಕೆ ವಹಿಸಬೇಕು.
*ಧಾರ್ಮಿಕ ಆಚರಣೆ / ಸಮಾರಂಭಗಳಲ್ಲಿ ತೆರೆದ ಪ್ರದೇಶಗಳಲ್ಲಿ 500ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.
ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ಸಾಮಾಜಿಕ ಅಂತರ ಪಾಲಿಸದೆ, ಮಾಸ್ಕ್ ಧರಿಸದೇ ಇರುವವರ ಮೇಲೆ ಹಿಂದಿನಂತೆ ದಂಡ ವಿಧಿಸಲಾಗುವುದು ಮತ್ತು ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ನ್ಯಾಷನಲ್ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆಕ್ಟ್-2005 ಅಡಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲು ಸರ್ಕಾರದ ನಿಯಮಾವಳಿಯಲ್ಲಿ ಅವಕಾಶವಿದ್ದು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೋವಿಡ್-೧೯ ನಿಯಂತ್ರಿಸಲು ಸಹಕರಿಸಿ ಎಂದು ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post