ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಲಾಡ್ಜ್ ಮಾಲೀಕರು ಹಾಗೂ ವ್ಯವಸ್ಥಾಕರುಗಳ ಸಭೆ ನಡೆಸಿದ ಪೊಲೀಸ್ ನಿರೀಕ್ಷಕ ಗಜೇಂದ್ರಪ್ಪ, ಪ್ರತಿಯೊಬ್ಬರು ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದರು.
ಲಾಡ್ಜ್ ಕಾರಿಡಾರ್ ಮತ್ತು ಮುಂಭಾಗದಲ್ಲಿ ಕಡ್ಡಾಯವಾಗಿ ರಸ್ತೆಗೆ ಮುಖ ಮಾಡಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಹಾಗೂ ಲಾಡ್ಜ್ ಗಳಿಗೆ ಬರುವ ಗ್ರಾಹಕರುಗಳ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ರಿಜಿಸ್ಟರ್ ನಲ್ಲಿ ನಮೂದು ಮಾಡಬೇಕು. ಗ್ರಾಹಕರ ವಿಳಾಸ ಮಾಹಿತಿ ಇರುವ ಐಡಿ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಪಡೆದುಕೊಂಡು ಅದರಲ್ಲಿರುವ ವಿವರವನ್ನು ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಲಾಡ್ಜ್ ಗೆ ಬರುವ ಗ್ರಾಹಕರು ತಂಗುವ ಉದ್ದೇಶವನ್ನು ಕೇಳಿ ಪಡೆದುಕೊಳ್ಳಬೇಕು. ಅದನ್ನು ಖಚಿತ ಪಡಿಸಿಕೊಂಡು ಕಡ್ಡಾಯವಾಗಿ ರಿಜಿಸ್ಟರ್ ನಲ್ಲಿ ನೋಂದಾಯಿಸಬೇಕು. ಲಾಡ್ಜ್ ಗೆ ಬರುವ ಗ್ರಾಹಕರ ಮೇಲೆ ಯಾವುದೇ ಅನುಮಾನ ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ, ಪೊಲೀಸ್ ಕಂಟ್ರೋಲ್ ರೂಂ ಅಥವಾ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು. ಪ್ರತಿಯೊಬ್ಬರು ನಿಯಮಗಳನ್ನು ಪಾಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಉಪ ನಿರೀಕ್ಷಕರು, ಜಯನಗರ ಮತ್ತು ಜಯನಗರ ಠಾಣಾ ವ್ಯಾಪ್ತಿಯಲ್ಲಿರುವ ಲಾಡ್ಜ್ ಮಾಲೀಕರು ಮತ್ತು ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















