ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಸರ್ವ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳುವುದರೊಂದಿಗೆ, ಕೋವಿಡ್ ನಿಯಂತ್ರಣ ಕ್ರಮಗಳು, ಕೋವಿಡ್ ಲಸಿಕಾಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್. ಸೆಲ್ವಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಕೇಂದ್ರಿತ ಪ್ರದೇಶಗಳಲ್ಲಿ ಐಎಲ್‌ಐ, ಸಾರಿ(ಎಸ್‌ಎಆರ್‌ಐ) ಪ್ರಕರಣಗಳನ್ನು ಕೋವಿಡ್ ಪರೀಕ್ಷೆ ಒಳಪಡಿಸಬೇಕು. ಹಾಗೂ ಎಲ್ಲರೂ ಕೋವಿಡ್ ನಿಯಂತ್ರಣ ಕ್ರಮಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಈವರೆಗೆ ಜಿಲ್ಲೆಯಲ್ಲಿ 12 ರಿಂದ 14 ವಯಸ್ಸಿನವರಿಗೆ ಕೋವಿಡ್ ಲಸಿಕೆ ಮೊದಲನೇ ಡೋಸ್ ಶೇ.110 ಮತ್ತು ಎರಡನೇ ಡೋಸ್ ಶೇ.86 ನೀಡಲಾಗಿದೆ. 15 ರಿಂದ 17 ವಯಸ್ಸಿನವರಿಗೆ ಮೊದಲನೇ ಡೋಸ್ ಶೇ.86, ಎರಡನೇ ಡೋಸ್ ಶೇ.97, 18+ ಮೊದಲನೇ ಡೋಸ್ 102, ಎರಡನೇ ಡೋಸ್ ಶೇ.99.9 ಹಾಗೂ ಮುನ್ನೆಚ್ಚರಿಕೆ ಡೋಸ್ ಶೇ.16.0 ನೀಡಲಾಗಿದ್ದು, ಮುನ್ನೆಚ್ಚರಿಕೆ ಡೋಸ್ ಶೇ.100 ಸಾಧನೆಗೆ ಕ್ರಮ ವಹಿಸಲಾಗುತ್ತಿದೆ ಎಂದರು.

ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಜಿಲ್ಲೆಯಲ್ಲಿ ಜನವರಿ 1 ರಿಂದ ನವೆಂಬರ್ 30 ವರೆಗೆ ಜಿಲ್ಲೇಯಲ್ಲಿ ಸರಾಸರಿ 2410 ಮಿ.ಮೀ ಮಳೆಯಾಗಿದೆ. 2022 ರ ಮುಂಗಾರು ಹಂಗಾಮಿನಲ್ಲಿ 79602 ಹೆ. ಭತ್ತದ ಗುರಿ ಇದ್ದು 79131 ಹೆಕ್ಟೇರ್ ಭೂಮಿಯಲ್ಲಿ ಭತ್ತ ಬೆಳೆಯಲಾಗಿದೆ. 46877 ಹೆ. ಮುಸಿಕಿನ ಜೋಳ, 742 ಹೆ. ನಲ್ಲಿ ಏಕದಳ(ರಾಗಿ ಜೋಳ), 353 ಹೆ. ಪ್ರದೇಶದಲ್ಲಿ ದ್ವಿದಳ ಧಾನ್ಯ ಮತ್ತು 1127 ಹೆ.ನಲ್ಲಿ ವಾಣಿಜ್ಯ ಬೆಳೆ ಬೆಳೆಯಲಾಗಿದೆ. ಏಪ್ರಿಲ್‌ನಿಂದ ನವೆಂಬರ್ ವರೆಗೆ 121390 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, 132662 ಮೆ.ಟನ್ ಗೊಬ್ಬರ ವಿತರಣೆಯಾಗಿದ್ದು, 25165 ಮೆ.ಟನ್ ದಾಸ್ತಾನಿದೆ. ಶೇ.81 ರಷ್ಟು ಬೀಜ ವಿತರಣೆ ಹಾಗೂ ಶೇ.80.09 ರಷ್ಟು ಔಷಧ ವಿತರಣೆಯಾಗಿದೆ ಎಂದು ಮಾಹಿತಿ ನೀಡಿದರು.

ಜಿಪಂ ಯೋಜನಾ ನಿರ್ದೇಶಕಿ ನಂದಿನಿ, ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 30 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದು ಈವರೆಗೆ 27,32,440 ಮಾನವ ದಿನಗಳನ್ನು ಪೂರೈಸಿ ಶೇ.91.08 ಭೌತಿಕ ಮತ್ತು ಶೇ.78.69 ಆರ್ಥಿಕ ಗುರಿ ಸಾಧಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪಂಚಾಯತ್ ಸಿಇಓ ಎನ್.ಡಿ. ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.










Discussion about this post