ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆ ಯೋಜನೆಗಳ ತ್ವರಿತಗತಿ ಮುಕ್ತಾಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ Ashwin Vaishnav ಅವರೊಂದಿಗೆ ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರು ಚರ್ಚೆ ನಡೆಸಿದ್ದಾರೆ.
ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಸಂಸದ ರಾಘವೇಂದ್ರ ಅವರು, ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಶಿವಮೊಗ್ಗ ಶಿಕಾರಿಪುರ ರಾಣಿಬೆನ್ನೂರು ನೂತನ ರೈಲ್ವೆ ಮಾರ್ಗ ನಿರ್ಮಾಣ ಕಾರ್ಯವನ್ನು, ಶಿವಮೊಗ್ಗ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ನಾಲ್ಕು ರೈಲ್ವೆ ಮೇಲ್ ಸೇತುವೆ ಕಾಮಗಾರಿಗಳನ್ನು, ಕೋಟೆಗೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕೋಚಿಂಗ್ ಡಿಪೋ ಕಾಮಗಾರಿ ಮತ್ತು ತಾಳಗುಪ್ಪ ತಡಸ ಹುಬ್ಬಳ್ಳಿ ನೂತನ ರೈಲ್ವೆ ಲೈನ್ ಕಾಮಗಾರಿಗಳನ್ನು ತ್ವರಿತವಾಗಿ ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳಿಸಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ಬೈಂದೂರು ಕುರಿತಾಗಿಯೂ ಪ್ರಸ್ತಾಪ
ಅಲ್ಲದೇ ಕುಂಸಿ, ಹಾರನಹಳ್ಳಿ, ಅರಸಾಳು ಮತ್ತು ಬೈಂದೂರು ವಿಧಾನಸಭಾ ವ್ಯಾಪ್ತಿಯ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ರೈಲುಗಳು ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
Also read: ಹಿಂದೂಗಳಿಗೆ ಮತ್ತೆ ಭರ್ಜರಿ ಜಯ: ಜ್ಞಾನವಾಪಿ ಮಸೀದಿ ಸರ್ವೆಗೆ ಹೈಕೋರ್ಟ್ ಅನುಮತಿ
ವೇಗ ಹೆಚ್ಚಳಕ್ಕೆ ಮನವಿ
ಇದೇ ಸಂದರ್ಭದಲ್ಲಿ ಶಿವಮೊಗ್ಗ ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ವೇಗ ಹೆಚ್ಚಿಸುವ ಬಗ್ಗೆ ಮತ್ತು ಸಮಯ ಬದಲಾವಣೆ ಬಗ್ಗೆ ಸಹ ಸನ್ಮಾನ್ಯ ಸಚಿವರಲ್ಲಿ ಚರ್ಚಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post