ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರೇಮ್ ಸಿಂಗ್‌ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಜಬೀಯ ಮೊಬೈಲ್ ತಪಾಸಣೆ ನಡೆಸಿದ ಸಂದರ್ಭದಲ್ಲಿ ಶಂಕಿತ ಉಗ್ರಗಾಮಿಗಳ ಜೊತೆ ಸಿದ್ದೇಶ್ವರ ನಗರದ ಯಾಸೀನ್ ಸಯ್ಯದ್, ಮಂಗಳೂರಿನ ಮಾಜ್ ಮುನೀರ್ ಮತ್ತು ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಶಾರೀಕ್ ಪ್ರಕರಣ ಬಯಲುಗೊಂಡಿದೆ ಎಂದು ಎಸ್‌ಪಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರೀಕ್ ಮತ್ತು ಮಾಜ್ ಮುನೀರ್ ಇಬ್ಬರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ನಿಷೇಧಿತ ಉಗ್ರ ಸಂಘಟನೆ ಹಾಗೂ ಯುಎಪಿಎ ಜೊತೆ ಅದರ ಅಡಿ ಕೆಲಸ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿ ಏನೇನು ಮಾಡಿದ್ದಾರೆ ಎಂಬುದು ಮುಂದಿನ ತನಿಖೆಯಲ್ಲಿ ಕಂಡು ಬರಲಿದೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.










Discussion about this post