No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಸೇರ್ಪಡೆ ಬಗ್ಗೆ ಆಯನೂರು ಮಂಜುನಾಥ್ ಸ್ಪಷ್ಟನೆ ಏನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 23, 2023
in ಶಿವಮೊಗ್ಗ, ರಾಜಕೀಯ
0
ಕಾಂಗ್ರೆಸ್ ಸೇರ್ಪಡೆ ಬಗ್ಗೆ ಆಯನೂರು ಮಂಜುನಾಥ್ ಸ್ಪಷ್ಟನೆ ಏನು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಳೆದ ಒಂದು ತಿಂಗಳಿನಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬ ಸುದ್ದಿ ಹರಡಿದ್ದು, ಇದಕ್ಕೆ ಪೂರ್ಣವಿರಾಮ ನೀಡಿ ನಿರೀಕ್ಷೆಯಂತೆ ನಾಳೆ ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ Congress ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್ ಮುಖಂಡ ಹಾಗೂ ಮಾಜಿ ಸಂಸದ ಆಯನೂರು ಮಂಜುನಾಥ್ Ayanuru Manjunath ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವ, ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಮುಖಂಡರೊಂದಿಗೆ ಚರ್ಚೆ ನಡೆದು ಪಕ್ಷ ಸೇರ್ಪಡೆಗೆ ಸಹಮತ ವ್ಯಕ್ತಪಡಿಸಿದ್ದರಿಂದ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದರು.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಅವಕಾಶವಿತ್ತು. ಕಾರಣಾಂತರಗಳಿಂದ ಆಗಿರಲಿಲ್ಲ. ಈಗ ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಎಲ್ಲರೂ ಸೇರಿ ಶಕ್ತಿ ಹಾಗೂ ಸಮಯ ನೀಡುತ್ತೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೆ. ಆದರೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನಿಂದ ಅವಕಾಶ ಸಿಕ್ಕಿದ್ದರಿಂದ ಸ್ಪರ್ಧೆ ಮಾಡಿದ್ದೆ ಎಂದರು.

ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸೇರ್ಪಡೆಗೆ ಒಳ್ಳೆಯ ಅವಕಾಶವಿದೆ ಹಾಗೂ ಸಹಕಾರ ದೊರೆಯುತ್ತದೆ ಎಂಬ ವಿಶ್ವಾಸದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದು, ಯಾವುದೇ ಷರತ್ತು ಇಲ್ಲದೆ ಸೇರ್ಪಡೆಗೊಳ್ಳುತ್ತಿದ್ದು, ವಿಧಾನ ಪರಿಷತ್‍ನ ಪದವೀಧರರ ಕ್ಷೇತ್ರ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷ ಅವಕಾಶ ನೀಡಿದರೆ ಸ್ಪರ್ಧೆ ಮಾಡುತ್ತೇನೆ ಎಂದರು.

ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಕೆಲವರು ವಿರೋಧ ಮಾಡುವುದು ಸಹಜ. ಆದರೆ ಶೇ.99ರಷ್ಟು ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿದ್ದಾರೆ. ಆದರೆ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೀಶ್, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವುದಕ್ಕೆ ವಿರೋಧಿಸಿದ್ದಾರೆ. ಅವರು ನನ್ನ ಚಿಕ್ಕ ಗೆಳೆಯ. ಅದನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದ ಅವರು, ನನ್ನ ನೂರಾರು ಬೆಂಬಲಿಗರು ಸಹ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.

Also read: ಆ.25ರಂದು ಬಸವಣ್ಣನವರ 38 ವಚನಗಳ ನೃತ್ಯ ರೂಪಕ

ಕಳೆದ ವಿಧಾನಸಭೆ ಚುನಾವಣೆಯಲ್ಲಿ Assembly Election ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಅವಕಾಶ ನೀಡಿತ್ತು. ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನನ್ನ ಗೆಲುವಿಗೆ ಸಾಕಷ್ಟು ಶ್ರಮವಹಿಸಿದ್ದರು. ಆದರೂ ಸೋಲು ಅನುಭವಿಸಬೇಕಾಯಿತು. ಜೆಡಿಎಸ್‍ನಲ್ಲಿ ಯಾವುದೇ ಗೊಂದಲ ಇರಲಿಲ್ಲ. ಆದರೆ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸೇರುತ್ತಿದ್ದು, ಜೆಡಿಎಸ್ ತೊರೆಯುತ್ತಿರುವುದು ಬೇಸರವಿಲ್ಲ ಎಂದರು.

ನನ್ನೊಂದಿಗೆ ಜೆಡಿಎಸ್‍ಗೆ ಬಂದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು, ಕಾಂಗ್ರೆಸ್‍ನಿಂದ 2018ರ ಚುನಾವಣೆಯಲ್ಲಿ ಸ್ಪರ್ಧಿಸಿ 59 ಸಾವಿರಕ್ಕೂ ಹೆಚ್ಚು ಮತ ಪಡೆದು ಸೋಲು ಅನುಭವಿಸಿದ್ದರು. ಆದರೆ ಪಕ್ಷದ ಕೆಲವರ ವರ್ತನೆಯಿಂದಾಗಿ ಬೇಸತ್ತು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಬಂದರು. ಈಗ ಅವರು ಕಾಂಗ್ರೆಸ್ ಸೇರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಂಬರುವ ದಿನಗಳಲ್ಲಿ ಸೇರಲೂಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ಪ್ರಮುಖರಾದ ಪರಂಧಾಮ ರೆಡ್ಡಿ, ಮಹೇಂದ್ರನಾಥ್, ಶಿ.ಜು. ಪಾಶಾ, ಲೋಕೇಶ್, ಐಡಿಯಲ್ ಗೋಪಿ, ಆಯನೂರು ಸಂತೋಷ್, ಎಸ್.ಪಿ. ಪಾಟೀಲ್, ರಿಯಾಜ್ ಅಹ್ಮದ್, ಸಯ್ಯದ್ ಶಫಿವುಲ್ಲಾ, ಹಿರಣ್ಣಯ್ಯ, ಲಕ್ಷ್ಮಣಪ್ಪ ಸೇರಿದಂತೆ ಹಲವರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆ.25ರಂದು ಬಸವಣ್ಣನವರ 38 ವಚನಗಳ ನೃತ್ಯ ರೂಪಕ

Next Post

ಬಹುದಿನಗಳ ಬೇಡಿಕೆ ಈಡೇರಿಕೆ | ಕುಂಸಿ-ಅರಸಾಳುವಿನಲ್ಲಿ  ರೈಲು ನಿಲುಗಡೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ಬಹುದಿನಗಳ ಬೇಡಿಕೆ ಈಡೇರಿಕೆ | ಕುಂಸಿ-ಅರಸಾಳುವಿನಲ್ಲಿ  ರೈಲು ನಿಲುಗಡೆ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL