ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಐಎಸ್’ಎಲ್ #VISL ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸುವ ಭಾಗವಾಗಿ ಅಗತ್ಯವಿರುವ ಕಬ್ಬಿಣದ ಅದಿರನ್ನು ಮಂಜೂರು ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಅದಿರು ಸಚಿವ ಕಿಷನ್ ರೆಡ್ಡಿ ಅವರನ್ನು ಭೇಟಿಯಾದ ಸಂಸದರು, ವಿಐಎಸ್’ಎಲ್ ಕಾರ್ಖಾನೆಗೆ ಅಗತ್ಯವಿರುವ ಕಬ್ಬಿಣದ ಅದಿರನ್ನು ಶೀಘ್ರ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.
Also read: ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಸೂಚನೆ | ಯಾವೆಲ್ಲಾ ಜಿಲ್ಲೆಗಳಿಗೆ ಎಫೆಕ್ಟ್?
ಇದೇ ವೇಳೆ ಕಾರ್ಖಾನೆಯ ಪುನರುಜ್ಜೀವನ ಸೇರಿದಂತೆ ಸಮಗ್ರ ವಿಚಾರಗಳನ್ನು ಸಂಸದರು ಸಚಿವರ ಗಮನಕ್ಕೆ ತಂದಿದ್ದಾರೆ.
ಇನ್ನು, ಜಿಲ್ಲೆಯ ಜೀವನಾಡಿಗಳಲ್ಲಿ ಒಂದಾಗಿರುವ ಪ್ರತಿಷ್ಠಿತ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ನಾವೂ ಹಾಗೂ ಕೇಂದ್ರ ಸರ್ಕಾರ ಕಂಕಣಬದ್ದರಾಗಿದ್ದೇವೆ ಎಂದು ಸಂಸದರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post