ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ನೂತನ ವಿಮಾನ ನಿಲ್ದಾಣ Shivamogga Airport ವೀಕ್ಷಣೆಗೆ ನೂರಾರು ಜನರು ಆಗಮಿಸಿ, ರನ್‍ವೇಯಲ್ಲಿ ವಾಹನ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ಮತ್ತು ಕಾಮಗಾರಿಗಳಿಗೆ ತೊಡಕಾಗದಂತೆ, ಸಾರ್ವಜನಿಕರ ಪ್ರವೇಶವನ್ನು ಉದ್ಘಾಟನೆ ಆಗುವವರೆಗೆ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದ್ದಾರೆ.













Discussion about this post