ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಬೆಡ್ ಇಲ್ಲ ಎಂದು ಬೋರ್ಡ್ ಹಾಕಿದ್ದು ಹೌದು… ಆದರೆ ಆ ನಂತರವೂ 100 ರೋಗಿಗಳಿಗೆ ಚಿಕಿತ್ಸೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಉಸ್ತುವಾರಿ ಸಚಿವ ಈಶ್ವರಪ್ಪ ಹೇಳಿದರು.
ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾಗಿಲ್ಲ. ಪತ್ರಿಕೆಗಳಲ್ಲಿ ಆಕ್ಸಿಜನ್ ಇದೆ ವೆಂಟಿಲೇಟರ್ ಇಲ್ಲ ಎಂದು ವರದಿಯಾಗಿದೆ. ಇದು ಸತ್ಯಕ್ಕೆ ದೂರವಾದದು. ಹೊರ ಊರುಗಳಿಂದ ಬಂದು ಚಿಕಿತ್ಸೆಗಾಗಿ ಪರದಾಡಬಾರದು. ಸ್ಥಳೀಯ ಆಸ್ಪತ್ರೆಗಳಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಿ ಎಂಬ ಮುಂಜಾಗರೂಕತೆಯಿಂದ ಮಾತ್ರ ಬೆಡ್ ಇಲ್ಲ ಎಂಬ ಬೋಡ್ ಹಾಕಲಾಗಿತ್ತು. ಆ ನಂತರವೂ ಸಹ ಚಿಕಿತ್ಸೆಗೆಗಾಗಿ ಆಗಮಿಸಿದ 100 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಹಿಂದಿಗಿಂತ ನಿನ್ನೆ ಕಡಿಮೆ ಪ್ರಕರಣಗಳು ದಾಖಲಾಗಿದೆ ಹಾಗೂ ಕೆಲವರು ಗುಣಮುಖರಾಗಿ ಬಿಡುಗಡೆ ಹೊಂದಿರುವ ಹಿನ್ನೆಲೆ ರೋಗಿಗಳ ಚಿಕಿತ್ಸೆಗೆ ಯಾವುದೇ ತೊಂದರೆಯಾಗಿಲ್ಲ. ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಬೇರೆ ಜಿಲ್ಲೆಗಳ ಸೋಂಕಿತರು ತಾವಿರುವ ಸ್ಥಳದಲ್ಲೇ ಚಿಕಿತ್ಸೆ ಪಡೆಯಲು ವ್ಯವಸ್ಥೆ ಮಾಡಿಕೊಳ್ಳವಂತೆ ಸಲಹೆ ನೀಡಿದರು.
ಆಮ್ಲಜನಕ ಪೂರೈಕೆಗಾಗಿ ಭದ್ರಾವತಿಯ ವಿಐಎಸ್‌ಎಲ್‌ನಲ್ಲ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದ್ದು, ಜಿಲ್ಲೆಯ ರೋಗಿಗಳಿಗೆ ಸಾಕಾಗುವಷ್ಟು ಆಮ್ಲಜನಕ ಲಭ್ಯವಾಗಲಿದೆ ಎಂದು ಹೇಳಿದರು.
ಮಾಸ್ಕ್ ಧರಿಸುವ ವಿಷಯವಾಗಿ ಜನರಲ್ಲಿ ಇನ್ನೂ ಜಾಗೃತಿ ಮೂಡಿಲ್ಲ. ದಂಡ ವಿಧಿಸಿದರೂ ಖಾಸಗಿ ವಾಹನಗಳು, ಆಟೋಗಳು ಸಂಚಾರ ಮಾಡುತ್ತಲೇ ಇದೆ. ಇದರಿಂದ ಅಪಾಯ ತಪ್ಪಿದ್ದಲ್ಲ, ಸಾರ್ವಜನಿಕರಲ್ಲಿ ಜಾಗೃತಿ ಮೂಡದ ಹೊರತು ಕೊರೋನಾ ನಿಯಂತ್ರಣ ಅಸಾಧ್ಯ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news










Discussion about this post