No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?

ಅವೈಜ್ಞಾನಿಕ ರಸಗೊಬ್ಬರ ಬಳಕೆಯಿಂದ ಹೆಚ್ಚುತ್ತಿರುವ ಕ್ಯಾನ್ಸರ್ ಭೀತಿ: ಎಂಎಲ್'ಸಿ ಡಾ.ಸರ್ಜಿ ಆತಂಕ

kalpa News by kalpa News
March 11, 2026
in ಶಿವಮೊಗ್ಗ
0
ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಣ್ಣಿನ ಆರೋಗ್ಯದ ಅರಿವಿಲ್ಲದೆ ರೈತರು ಯಥೇಚ್ಛವಾಗಿ ಮತ್ತು ಅವೈಜ್ಞಾನಿಕವಾಗಿ ಬಳಸುತ್ತಿರುವ ರಾಸಾಯನಿಕ ರಸಗೊಬ್ಬರಗಳು ಹಾಗೂ ಕೀಟನಾಶಕಗಳು ಇಂದು ಜನಸಾಮಾನ್ಯರ ಜೀವಕ್ಕೆ ಕುತ್ತು ತರುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ.

ಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಈ ವಿಷಕಾರಿ ಅಂಶಗಳು ನದಿ ಮತ್ತು ನೀರಿನ ಮೂಲಗಳನ್ನು ಸೇರುತ್ತಿರುವುದರಿಂದ ಕ್ಯಾನ್ಸರ್’ನಂತಹ ಮಾರಕ ಕಾಯಿಲೆಗಳು ಉಲ್ಬಣಿಸುತ್ತಿದ್ದು, ಸರ್ಕಾರ ಕೂಡಲೇ ‘ಮಣ್ಣಿನ ಆರೋಗ್ಯ ಕಾರ್ಡ್’ #SoilHealthCard ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಆಗ್ರಹ ಪಡಿಸಿದರು.

ರೈತರು ಬಳಸುವ ರಾಸಾಯನಿಕ ಗೊಬ್ಬರಗಳಿಂದ #ChemicalFertilizer ಕ್ಯಾನ್ಸರ್, ನರರೋಗ ಕಾಯಿಲೆಗಳು, ಮೆದುಳಿನ ಗಡ್ಡೆ ಮತ್ತು ಸ್ತನ ಕ್ಯಾನ್ಸರ್, ಥೈರಾಯಿಡ್ ಸಮಸ್ಯೆ, ಹಾರ್ಮೋನ್ ಸಮಸ್ಯೆಗಳು, ಬಂಜೆತನ, ಹುಟ್ಟುವ ಮಕ್ಕಳಲ್ಲಿ ಅಂಗವೈಕಲ್ಯದಂತಹ ಮಾರಕ ಖಾಯಿಲೆಗಳು ವ್ಯಾಪಕವಾಗಿ ಹರಡುತ್ತಿದೆ. ಹೃದಯ ಮತ್ತು ಶ್ವಾಸಕೋಶ ಇತ್ತೀಚಿನ ದಿನಗಳಲ್ಲಿ ಸಾವಿಗೆ ಕಾರಣವಾಗುವ ಪ್ರಮುಖ ಮೂರು ಕಾಯಿಲೆಗಳಲ್ಲಿ ಕ್ಯಾನ್ಸರ್ ಕೂಡ ಒಂದಾಗಿದೆ ಎಂದಿದ್ದಾರೆ.

2024ರ ವರದಿಯಂತೆ ದೇಶದಲ್ಲಿ 15.6 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದ್ದು, 8.7 ಲಕ್ಷ ಜನ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 2.30 ಲಕ್ಷ ಕ್ಯಾನ್ಸರ್ ರೋಗಿಗಳಿದ್ದು, 2024ರಲ್ಲಿ 87,855 ಹೊಸ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ, ವಾರ್ಷಿಕ 25,000 ಸಾವುಗಳು ಸಂಭವಿಸುತ್ತಿವೆ. ಪ್ರತಿ ವರ್ಷ 87,000 ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ದೇಶದ ಕೀಟನಾಶಕ ಬಳಕೆ 0.6 ಕೆಜಿ ಪ್ರತಿ ಹೆಕ್ಟೇರ್’ಗೆ ಇದ್ದರೆ, ಕರ್ನಾಟಕದಲ್ಲಿ ಇದು ಆತಂಕಕಾರಿ ರೀತಿಯಲ್ಲಿ 1 ರಿಂದ 1.5 ಕೆಜಿ ಪ್ರತಿ ಹೆಕ್ಟೇರ್’ಗೆ ಇದೆ. ಹಾಗೆಯೆ ದೇಶದಲ್ಲಿ NPK ರಾಸಾಯನಿಕಗಳ ಗೊಬ್ಬರ ಬಳಕೆ 135 ಕೆ.ಜಿ ಪ್ರತಿ ಹೆಕ್ಟರ್ ಇದ್ದರೆ ರಾಜ್ಯದಲ್ಲಿ 120 ರಿಂದ 130 ಕೆಜಿ ಪ್ರತಿ ಹೆಕ್ಟರ್ ರಾಸಾಯನಿಕ ಗೊಬ್ಬರಗಳ ಬಳಕೆ ಇದೆ ಎಂದಿದ್ದಾರೆ.
ರಾಜ್ಯದಲ್ಲಿ ರಾಸಾಯನಿಕಗಳ ಬಳಕೆ 2021-22ರಲ್ಲಿ 30 ಲಕ್ಷ ಮೆಟ್ರಿಕ್ ಟನ್ ಇದ್ದರೆ 2023-24ರಲ್ಲಿ 32 ಲಕ್ಷ ಮೆಟ್ರಿಕ್ ಟನ್’ಗೆ ಏರಿಕೆಯಾಗಿದೆ. ದೇಶದಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಆಹಾರದ ಮಾದರಿಗಳಲ್ಲಿ ಕೀಟನಾಶಕಗಳ ಅಂಶ ಪತ್ತೆಯಾಗಿದೆ, ಕೆಲವು ಸಲ ಇವು ಸುರಕ್ಷಿತ ಮಿತಿಗಿಂತಲೂ ಹೆಚ್ಚಾಗಿರುತ್ತವೆ ಎಂದು ವರದಿಗಳು ಹೇಳುತ್ತವೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದ ತುಂಗಾ ನದಿಯ ನೀರನ್ನು ಪರೀಕ್ಷಿಸಿದಾಗ ಆಘಾತಕಾರಿ ಅಂಶಗಳು ಹೊರಬಂದಿವೆ. ನೀರಿನಲ್ಲಿ ಇರಬೇಕಾದ ಅಲ್ಯೂಮಿನಿಯಂ ಪ್ರಮಾಣ ಲೀಟರ್’ಗೆ 0.03 ರಿಂದ 0.063 ಎಂಎಲ್ ಇರಬೇಕು. ಆದರೆ, ತುಂಗಾ ನದಿಯಲ್ಲಿ ಇದು 0.021 ರಿಂದ 13.4 ಎಂಎಲ್ ವರೆಗೆ ಪತ್ತೆಯಾಗಿದೆ. ಇಂತಹ ನೀರನ್ನು ಕುಡಿಯುವುದರಿಂದ ಮೆದುಳಿನ ಕಾಯಿಲೆ, ಕಿಡ್ನಿ, ಲಿವರ್ ಹಾನಿ ಮತ್ತು ಮೂಳೆಗಳಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳು ಎದುರಾಗುತ್ತಿವೆ ಎಂದು ಡಾ. ಸರ್ಜಿ ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 1.1 ಕೋಟಿ ಹೆಕ್ಟೇರ್ ಕೃಷಿ ಭೂಮಿ ಇದ್ದರೂ ವರ್ಷಕ್ಕೆ ಕೇವಲ 5 ಲಕ್ಷ ಮಣ್ಣಿನ ಪರೀಕ್ಷೆಗಳು ಮಾತ್ರ ನಡೆಯುತ್ತಿವೆ. ಕೇವಲ 6 ಕೀಟನಾಶಕ ಪರೀಕ್ಷಾ ಕೇಂದ್ರಗಳಿದ್ದು, ವರ್ಷಕ್ಕೆ ಕೇವಲ 6,000 ಪರೀಕ್ಷೆಗಳು ಮಾತ್ರ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಜಾಹೀರಾತಿಗೆ ಕಳೆದ ಮೂರು ವರ್ಷಗಳಲ್ಲಿ 520 ಕೋಟಿ ರೂಪಾಯಿಗಳನ್ನು ವ್ಯಯಿಸಿದೆ. ಈ ಹಣವನ್ನು ಜಾಹೀರಾತುಗಳ ಬದಲಿಗೆ ಕೃಷಿ ಜಾಗೃತಿ ಮತ್ತು ಮಣ್ಣಿನ ಆರೋಗ್ಯ ಪರೀಕ್ಷೆಗಳಿಗೆ ಬಳಸಬೇಕು ಸರ್ಕಾರ ಕೂಡಲೇ ರೈತರಲ್ಲಿ ಜಾಗೃತಿ ಮೂಡಿಸಿ, ಮಣ್ಣಿನ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಡಾ. ಧನಂಜಯ ಸರ್ಜಿ ಆಗ್ರಹಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಿರಂತರವಾಗಿ ಮಣ್ಣಿನ ಪರೀಕ್ಷೆ ಮಾಡಿಸಲು ಮತ್ತು ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಮಾಡುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದೇವೆ. ರಾಸಾಯನಿಕ ಗೊಬ್ಬರಗಳನ್ನು ಬಿಟ್ಟು ನೈಸರ್ಗಿಕ ಗೊಬ್ಬರಗಳಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿ 1,25,000 ಎಕರೆಯನ್ನು ನೈಸರ್ಗಿಕ ಕೃಷಿ ಮಾಡಬೇಕೆಂದು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ, ಈ ಸಾಲಿನ ಬಜೆಟ್’ನಲ್ಲಿಯೂ ವಸುದಾಮೃತ ಎಂಬ ಯೋಜನೆಯನ್ನು ಘೋಷಣೆ ಮಾಡಿದ್ದೇವೆ. ಈ ಯೋಜನೆ ಅಡಿ ಸಾವಯವ ಗೊಬ್ಬರವನ್ನು ಹೆಚ್ಚಾಗಿ ಕೊಡುವಂತಹದನ್ನು ಮಾಡುತ್ತಿದ್ದೇವೆ ಎಂದಿದ್ದಾರೆ.

ರೋಣ ತಾಲೂಕನ್ನು ಸಂಪೂರ್ಣವಾಗಿ ಸಾವಯವ ತಾಲೂಕು ಎಂದು ಘೋಷಣೆ ಮಾಡಿದ್ದೇವೆ, ಈ ಬಾರಿ ಮಂಡ್ಯದ ಪಾಂಡವಪುರ ತಾಲೂಕನ್ನು ಸಾವಯವ ತಾಲೂಕು ಎಂದು ಘೋಷಣೆ ಮಾಡಲಿದ್ದೇವೆ, ಜನರ ಆರೋಗ್ಯ ಮತ್ತು ಮಣ್ಣಿನ ಆರೋಗ್ಯ ಇವೆರಡನ್ನು ಗಮನದಲ್ಲಿಟ್ಟುಕೊಂಡು ಕೃಷಿಕರಿಗೆ ನೈಸರ್ಗಿಕ ಗೊಬ್ಬರಗಳಿಂದಲೂ ಇಳುವರಿ ಪಡೆಯಬಹುದು ಎಂದು ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Chemical fertilizerDr. Dhananjaya SarjiSoil healthSoil Health Cardಡಾ. ಧನಂಜಯ ಸರ್ಜಿಬೆಂಗಳೂರುಮಣ್ಣಿನ ಆರೋಗ್ಯಮಣ್ಣಿನ ಆರೋಗ್ಯ ಕಾರ್ಡ್ರಾಸಾಯನಿಕ ಗೊಬ್ಬರ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಒಂದೇ ಬ್ಯಾಚ್’ನ ಹಲವು ಮಂದಿ ಅದು ಹೇಗೆ ಹೆಚ್ಚು ಅಂಕ ಗಳಿಸುತ್ತಾರೆ? ಎಂಎಲ್’ಸಿ ಧನಂಜಯ ಸರ್ಜಿ ಪ್ರಶ್ನೆ

Next Post

ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

kalpa News

kalpa News

Next Post
ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL