ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪ್ರಸ್ತುತ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಮುಂದುವರೆಯುತ್ತಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.
ಜಿಲ್ಲೆಯಲ್ಲಿ ಜೂನ್ 21ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ನಂತರ ಮುಂದುವರೆಯಲಿದೆಯೇ, ಇಲ್ಲವೇ ಎಂಬುದು ಸರ್ಕಾರದ ತೀರ್ಮಾನಕ್ಕೆ ಬಿಟ್ಟ ವಿಚಾರವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಕಳೆದ ವಾರ ಮುಖ್ಯಮಂತ್ರಿಗಳ ಜೊತೆ ಮಾತನಾಡಿದಾಗ ಸೋಂಕು ಶೇ.5ಕ್ಕೂ ಹೆಚ್ಚಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಸಲಾಗತ್ತು. ಆದರೆ ಈ ವಾರ ಕೊರೋನಾ ಸೋಂಕಿನ ಪಾಸಿಟಿವಿಟಿ ಶೇ.5ಕ್ಕಿಂತ ಕಡಿಮೆ ಬಂದಿದೆ. ಆದರೆ ಲಾಕ್‌ಡೌನ್ ಮುಂದುವರೆಯುವ ಬಗ್ಗೆ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಟ್ಟ ವಿಷಯವಾಗಿದ್ದು, ಸರ್ಕಾರ ಏನು ಸೂಚಿಸುತ್ತದೆಯೋ ಅದನ್ನ ಕಾರ್ಯಗತಗೊಳಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post