ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಜೂನ್ 20 ರಂದು ಭಾನುವಾರ ಬೆಳಿಗ್ಗೆ 10:30ಕ್ಕೆ ಆನ್‌ಲೈನ್ ಮೂಲಕ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ, ದ್ವಿತೀಯ ಪಿಯುಸಿ ನಂತರ ಮುಂದೇನು? ಉಚಿತ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ.
ಕಲೆ, ವಾಣಿಜ್ಯ, ವಿಜ್ಞಾನ, ವೈದ್ಯಕೀಯ, ಎಂಜಿನಿಯರಿಂಗ್, ಕಾನೂನು, ಫಾರ್ಮಸಿ ಪದವಿ ಆಧಾರಿತ ಕೋರ್ಸ್‌ಗಳ ಆಯ್ಕೆ, ಸಿಇಟಿ ಪರೀಕ್ಷೆಯ ಅವಶ್ಯಕತೆ ಸೇರಿದಂತೆ ಇನ್ನಿತರ ಕೋರ್ಸ್‌ಗಳ ಮಾಹಿತಿ ಹಾಗೂ ಆಯ್ಕೆಗಳ ವಿಧಾನಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಕೊಳ್ಳುವುದರ ಕುರಿತು ಹಲವು ಶಿಕ್ಷಣ ತಜ್ಞರು ಮಾಹಿತಿ ನೀಡಲಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಶಿಕ್ಷಣದ ವಿಚಾರದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಅನೇಕ ಗೊಂದಲಗಳು ಉಂಟಾಗಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಶಿಕ್ಷಣದ ಕುರಿತ ಮತ್ತಷ್ಟು ಮಾಹಿತಿಗಳನ್ನು ನೀಡಲು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಮತ್ತು ಪೋಷಕರು ಈ ಆನ್‌ಲೈನ್ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದ್ದು https://forms.gle/nUHCLig7Kx9CeMzbA ಲಿಂಕ್ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post