ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಕಾಶಿಪುರದ ಬಳಿ ನಿರ್ಮಿಸಲಾಗುತ್ತಿರುವ ರೈಲ್ವೆ ಫ್ಲೆಓವರ್-ಅಂಡರ್ ಪಾಸ್ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಎಲ್’ಸಿ 52 ಕಾಶಿಪುರ ಗೇಟ್ ಬಳಿಯ ರೈಲ್ವೆ ಮೇಲ್ಸೇತುವೆ/ಕೆಳ ಸೇತುವೆ ನಿರ್ಮಾಣ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ಅಂತಿಮ ಹಂತದ ಕಾಮಗಾರಿ ಮಾತ್ರ ಬಾಕಿಯಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಅಂತಿಮ ಹಂತದ ಬಾಕಿ ಕಾಮಗಾರಿಯನ್ನು ಶೀಘ್ರ ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ತಿಳಿಸಿದರು.
Also read: ಟ್ರಾಫಿಕ್ ಜಾಮ್ ಮಾಡಿ ರೀಲ್ಸ್ ಶೋಕಿ ಮಾಡಿದವರಿಗೆ ಸಖತ್ ಶಾಕ್ ಕೊಟ್ಟ ಪೊಲೀಸರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post