ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಇವರು ಡಿ.17ರಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮಕ್ಕೆ(ಮಾರಿಕಾಂಬ ಸಮುದಾಯ ಭವನ) ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.
ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡುವರು.
ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಡಿಸೆಂಬರ್ 15ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.
Also read: ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post