ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆತ್ಮಹತ್ಯೆ ಮಾಡಿಕೊಂಡಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ ಸರ್ಕಾರ ಘೋಷಿಸಿದ ಪರಿಹಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಷ್ಟ್ರಭಕ್ತರ ಬಳಗದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು #CM Siddaramaiah ಸದನದಲ್ಲಿ ವಾಲ್ಮೀಕಿ ನಿಗಮದ ಹಗರಣವನ್ನು ಒಪ್ಪಿಕೊಂಡು ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿ 3 ತಿಂಗಳಾಗಿದೆ. ಆದರೂ ಅವರ ಕುಟುಂಬಕ್ಕೆ ನೆರವು ನೀಡಿಲ್ಲ. ಮೃತ ಚಂದ್ರಶೇಖರ್ ಪತ್ನಿ ಕವಿತಾ ಅವರು ಇಂದು ಖುದ್ದಾಗಿ ಡಿಸಿ ಕಚೇರಿಗೆ ಬಂದು ಮನವಿ ನೀಡಿದ್ದಾರೆ. ಅವರು ಆರ್ಥಿಕ ದುಸ್ಥಿತಿಯಿಂದ ಈಗಾಗಲೇ ತಾಯಿ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಮತ್ತು ಕುಟುಂಬದ ನಿರ್ವಹಣೆ ಮಾಡಲಾಗದೇ ಕರುಣಾಜನಕ ಸ್ಥಿತಿಯಲ್ಲಿದ್ದಾರೆ. ಕೂಡಲೇ ಘೋಷಿತ ಅನುದಾನ ಬಿಡುಗಡೆ ಮಾಡಬೇಕು ಎಂದರು.

Also read: ಬೆಳೆಸಿದ ಸಂಸ್ಥೆಗೆ ದ್ರೋಹ ಮಾಡಿದ ಯಾರನ್ನೇ ಆದರೂ ಕ್ಷಮಿಸಲು ಸಾಧ್ಯವಿಲ್ಲ: ಸಂಸದ ರಾಘವೇಂದ್ರ
ಹೋರಾಟ ನಿಲ್ಲಿಸುವುದಿಲ್ಲ, ಸರ್ಕಾರ ಅವರ ನೋವಿಗೆ ಸ್ಪಂಧಿಸಿಲ್ಲ ಪರಿಶಿಷ್ಟ ಜಾತಿ/ಪಂಗಡಗಳ ಹಣವನ್ನು ಬೇರೆ ಉದ್ದೇಶಕ್ಕೆ ಸರ್ಕಾರ ಬಳಸಿಕೊಂಡಿದೆ. ನಮ್ಮ ಹೋರಾಟ ರಾಜಕೀಯಕ್ಕಾಗಿ ಅಲ್ಲ, ಕವಿತಾ ಕುಟುಂಬದೊಂದಿಗೆ ನಾವೆಲ್ಲ ಇದ್ದೇವೆ. ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇದ್ದರೆ ಪರಿಶಿಷ್ಟ ವರ್ಗದ ಹೆಣ್ಣು ಮಗಳಿಗೆ ಆದ ಅನ್ಯಾಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕೆ.ಈ. ಕಾಂತೇಶ್, ಶಂಕರ್, ಶಂಕರ್‍ಗನ್ನಿ, ದೊರೆ ಚಿನ್ನಪ್ಪ, ಶಶಿಕಲಾ , ಈ. ವಿಶ್ವಾಸ್, ಸುವರ್ಣಶಂಕರ್, ಸುರೇಖಾ, ಬಾಲು, ಅ.ಮಾ.ಪ್ರಕಾಶ್, ಮೋಹನ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post