ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಸಭೆಗೆ ನುಗ್ಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಬಂಧಿಸಿರುವುದನ್ನು ವಿರೋಧಿಸಿ ಜಯನಗರ ಠಾಣೆ ಮುಂದೆ ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಅವರು ಕೈಕಟ್ಟಿ ನಿಂತು ಪ್ರತಿಭಟನೆ ನಡೆಸಿದ್ದಾರೆ.
ಪಠ್ಯಪುಸ್ತಕದಿಂದ ಸ್ವತಂತ್ರ ಹೋರಾಟಗಾರರನ್ನು ಕೈಬಿಟ್ಟಿದ್ದು ಹಾಗೂ ಬಿಜೆಪಿ ಅವಧಿಯಲ್ಲಿನ ಪಠ್ಯವನ್ನು ಹರಿದು ಹಾಕಿದ್ದನ್ನು ವಿರೋಧಿಸಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಸಚಿವ ಮಧು ಬಂಗಾರಪ್ಪ ಅವರು ಸಭೆ ನಡೆಸುತ್ತಿದ್ದ ವೇಳೆ ನುಗ್ಗಿ ಪ್ರತಿಭಟನೆ ನಡೆಸಿದರು. ಮಾತ್ರವಲ್ಲ ಘೋಷಣೆ ಕೂಗಿ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ್ದರು.
Also read: ಸಾಧನೆಗೆ ಮಹಿಳೆ ಪುರುಷರು ಎಂಬ ಭೇದವಿಲ್ಲ: ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಅಭಿಪ್ರಾಯ
ಸಭೆಗೆ ನುಗ್ಗಿದ ವೇಳೆ ಸ್ಥಳದಲ್ಲಿದ್ದ ಪೊಲೀಸರು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಹರಿಕೃಷ್ಣ, ಪ್ರಮುಖರಾದ ದರ್ಶನ್, ಸುಹಾಸ್ ಶಾಸ್ತಿç ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.
ಈ ವಿಚಾರ ತಿಳಿದ ಶಾಸಕ ಚನ್ನಬಸಪ್ಪ ಅವರು, ಪೊಲೀಸರ ನಡೆಯನ್ನು ಖಂಡಿಸಿ ಠಾಣೆ ಮುಂದೆ ಮೌನವಾಗಿ ಕೈಕಟ್ಟಿ ನಿಲ್ಲುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಕಾರ್ಯಕರ್ತರ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕರು, ಬಿಜೆಪಿ ಸರ್ಕಾರವಿದ್ದಾಗ ಹೋರಾಟ ಮಾಡಿದಾಗ ಕಾಂಗ್ರೆಸ್ಸಿಗರನ್ನು ಬಿಡುಗಡೆ ಮಾಡಿ ಕಳುಹಿಸಲಾಗಿತ್ತು. ಆದರೆ, ಈಗ ನಮ್ಮ ಕಾರ್ಯಕರ್ತರನ್ನು ಏಕೆ ಬಿಡುಗಡೆ ಮಾಡಿಲ್ಲ. ಈ ತಾರತಮ್ಯ ನೀತಿ ಏಕೆ ಎಂದು ಪ್ರಶ್ನಿಸಿದರು.
ಚನ್ನಬಸಪ್ಪ ಅವರೊಂದಿಗೆ ನಗರಾಧ್ಯಕ್ಷ ಜಗದೀಶ್, ಎಂಎಲ್’ಸಿ ಡಿ.ಎಸ್. ಅರುಣ್, ಪ್ರಮುಖರಾದ ವಿಶ್ವಾಸ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















