ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಉತ್ಪಾದಕರಿಂದ ಹಾಲು ಖರೀದಿ ದರ ಇಳಿಕೆ ಮಾಡಿರುವುದನ್ನು ಖಂಡಿಸಿ ಭಾರತೀಯ ಕೀಸಾನ್ ಸಂಘ ದಕ್ಷಿಣ ಪ್ರಾಂತ್ಯದ ನೇತೃತ್ವದಲ್ಲಿ ಹಾಲು ಉತ್ಪಾದಕ ರೈತರು ಇಂದು ಶಿಮೂಲ್ Shimul ಎದುರು ರಸ್ತೆಗೆ ಹಾಲು ಸುರಿದು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಈ ಹಿಂದೆ 2023ರ ಅಗಸ್ಟ್ 1ರಂದು 1 ಲೀಟರ್’ಗೆ 3 ರೂ. ಏರಿಕೆ ಮಾಡಿತ್ತು. ಆಗ ರೈತರಿಗೆ 33.50 ರೂ. ಸಿಗುತ್ತಿತ್ತು. ಮತ್ತೆ ಅಕ್ಟೋಬರ್ 1 ರಂದು ಪ್ರತಿ ಲೀಟರ್’ಗೆ 1.25ರೂ.ನಷ್ಟು ಕಡಿತವಾಗಿ 31.75 ರೂ. ಸಿಗುತ್ತಿತ್ತು. ಆದರೆ ಈಗ ಮತ್ತೆ ಲೀಟರ್’ಗೆ 2 ರೂ. ಕಡಿಮೆ 29.75 ರೂ. ಕೊಡುತ್ತಿದ್ದಾರೆ. ಕಳೆದ 8 ತಿಂಗಳಿನಲ್ಲಿ 3 ರೂ. ಏರಿಕೆ ಮಾಡಿ 3.70 ಕಡಿತ ಮಾಡಿದ್ದಾರೆ. ಅಂದರೆ ಮೂಲ ದರಕ್ಕಿಂತ 70 ಪೈಸೆ ಕಡಿಮೆಯಾಗಿದೆ ಎಂದು ಪ್ರತಿಭಟನಕಾರರು ತಿಳಿಸಿದರು.

Also read: ಸೌತ್ ಏಷ್ಯನ್ ಏರೋಬಿಕ್ಸ್ ಸ್ಪರ್ಧೆ: ಜೈನ್ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‍ಗೆ ಕನಿಷ್ಟ 3.5 ಪ್ಯಾಟಿಗೆ 50 ರೂ. ನಿಗಧಿ ಮಾಡಬೇಕು. ಪಶು ಆಹಾರ ದರವನ್ನು 50 ಕೆ.ಜಿ. ಚೀಲಕ್ಕೆ 800 ರೂ. ನಿಗಧಿ ಮಾಡಬೇಕು. ಪಶು ಕಾರ್ಖಾನೆಗಳಿಗೆ ಕರ್ನಾಟಕ ರೈತರಿಂದ ಬೆಳೆದ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು. ಉತ್ಪಾದಕರ ಹಸುಗಳಿಗೆ ಮೇವಿನ ಬೀಜ ನೀಡಬೇಕು. ಕೃತಕ ಗರ್ಭಧಾರಣೆ ಉಚಿತವಾಗಿ ನೀಡಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ 3 ಜಿಲ್ಲೆಗಳ ನೂರಾರು ಹಾಲು ಉತ್ಪಾದಕರು ಭಾಗವಹಿಸಿದ್ದರು. ಭಾರತೀಯ ಕೀಸನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ್ಯದ ಉಪಾಧ್ಯಕ್ಷ ಕೆ.ಸಿ. ಸದಾಶಿವಪ್ಪ ಪ್ರವೀಣ್ ಪಟೇಲ್, ಗಂಗಾಧರ ಕಾಸರಗೂಡು, ಭೀಮರಾವ್, ಸುಧಾಪರಮೇಶ್ವರಪ್ಪ, ಅಮೃತಾ ಚಳ್ಳಕೆರೆ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post