ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹಿರಿಯ ನಾಯಕ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಮಾತನಾಡುವ ಮುನ್ನ ನಿಮ್ಮ ಅವಧಿಯಲ್ಲಿದ್ದ ಕೆಲಸವೇಕೆ ಮಾಡಿಲ್ಲ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರಿಗೆ ಬಿಜೆಪಿ ರೈತಮೋರ್ಚದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಚಿವ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಸನ್ನಕುಮಾರ್ ಅವರಿಗೆ ಪ್ರತಿದಾಳಿ ನಡೆಸಿದರು.
ಈಶ್ವರಪ್ಪ ಅವರಂತಹ ಹಿರಿಯ ನಾಯಕರ ವಿರುದ್ಧ ನಿರ್ಲಕ್ಷ್ಯ ಎಂಬ ಪದ ಬಳಿಸಿರುವುದು ಹಾಗೂ ಇಲ್ಲ ಸಲ್ಲದ ವಿಚಾರಕ್ಕೆ ರಾಜೀನಾಮೆ ಕೇಳಿರುವುದು ಹಾಸ್ಯಾಸ್ಪದವಾಗಿದೆ. ಜಿಲ್ಲೆಯ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಕಾನೂನು ಬಿಗಿಯಾಗಲಿ ಎಂಬ ಕಾರಣಕ್ಕಾಗಿ ಖಾರವಾಗಿ ಮಾತನಾಡಿದ್ದಾರೆಯೇ ವಿನಾ ಜಿಲ್ಲಾ ರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡುತ್ತೇವೆ ಎಂದು ಹೇಳಿಲ್ಲ ಎಂದರು.
Get In Touch With Us info@kalpa.news Whatsapp: 9481252093
















