ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾನಗರದಲ್ಲಿ ಅಂತಿಮ ಹಂತದ ನಿರ್ಮಾಣ ಕಾಮಗಾರಿಯಲ್ಲಿರುವ ವೃತ್ತಕಾರದ ರೈಲ್ವೆ ಮೇಲ್ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಸುಳಿವು ನೀಡಿರುವ ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರು, ವಿದ್ಯಾನಗರದಲ್ಲಿ ನಿರ್ಮಾಣವಾಗುತ್ತಿರುವ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಆದಷ್ಟು ಶೀಘ್ರ ಮುಕ್ತಾಯಗೊಳಿಸುವ ಸಲುವಾಗಿ ನಿರಂತರವಾಗಿ ಕೆಲಸ ನಡೆಯುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರಿಂದಲೇ ಈ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡಿಸಬೇಕು ಎಂಬ ಆಸೆಯಿದ್ದು, ಈ ಕುರಿತಂತೆ ಪ್ರಯತ್ನಗಳು ನಡೆದಿವೆ ಎಂದರು.
Also read: ಇನ್ವೆಸ್ಟರ್ ಮೀಟ್’ನಂತೆ ನೆರೆಯ ಜಿಲ್ಲೆಗಳನ್ನು ಸೇರಿಸಿಕೊಂಡು ಶಿವಮೊಗ್ಗದಲ್ಲಿ ಟೂರಿಸಂ ಶೋ!?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post