No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಡಿಸಿಎಂ ಈಶ್ವರಪ್ಪ

kalpa News by kalpa News
October 19, 2023
in ಶಿವಮೊಗ್ಗ
0
ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಡಿಸಿಎಂ ಈಶ್ವರಪ್ಪ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಏಕೆ ಬೀಳಿಸಬಾರದು, ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ DCM Eshwarappa ಕುಟುಕಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ ಜನಪರವಾಗಿ ಕೆಲಸ ಮಾಡುತ್ತಿಲ್ಲ. ಭ್ರಷ್ಟಾಚಾರ ತಲೆ ಎತ್ತಿದೆ. ವಿದ್ಯುತ್ ಕೊರತೆ ತಲೆದೋರಿದೆ. ರೈತರು, ಕಾರ್ಮಿಕರು ನಿರಾಶರಾಗಿದ್ದಾರೆ. ಹಣ ಕೊಟ್ಟರೂ ವಿದ್ಯುತ್ ಇಲ್ಲ, ಇನ್ನು ಉಚಿತ ಭಾಗ್ಯ ಎಲ್ಲಿಂದ ಬಂತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಖರೀದಿ ಮಾಡಬೇಕಿತ್ತು. ರಾಜ್ಯದ ಅಭಿವೃದ್ಧಿ ಮೊದಲೇ ಇಲ್ಲ. ಇಂತಹ ಸರ್ಕಾರವನ್ನು ಇನ್ನೂ ಉಳಿಸಬೇಕೆ ಎಂದು ಪ್ರಶ್ನೆ ಮಾಡಿದರು.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಸಾಮ್ರಾಜ್ಯವೇ ಇಲ್ಲಿದೆ. ಅದರಲ್ಲೂ ಡಿ.ಕೆ. ಶಿವಕುಮಾರ್ ಅಕ್ರಮ ಹಣ ಸಂಪಾದನೆ ಮಾಡಿದ್ದಾರೆ ಎಂದು ಇಡೀ ದೇಶಕ್ಕೆ ಗೊತ್ತಿದೆ. ಜೈಲಿನಲ್ಲಿದ್ದು ಬೇಲ್ ಮೇಲೆ ಹೊರಗೆ ಬಂದವರು. ಕೇಸ್ ನಡೆಯುತ್ತಾ ಇದೆ, ಅವರ ಮೇಲಿನ ವಿಚಾರಣೆ ಮತ್ತೆ ಮುಂದುವರಿದಿದೆ. ಅವನೇನು ಸತ್ಯ ಹರಿಶ್ಚಂದ್ರ ಅಲ್ಲ. ಮತ್ತೆ ಜೈಲಿಗೆ ಹೋಗಿಯೇ ಹೋಗುತ್ತಾನೆ ಎಂದರು.

ಬಿಜೆಪಿ ಎಲ್ಲಾ ಭ್ರಷ್ಟಾಚಾರವನ್ನು ಸಹಿಸಿಕೊಂಡು ಸುಮ್ಮನಿರುವ ವಿರೋಧ ಪಕ್ಷವಲ್ಲ. ಇತ್ತೀಚೆಗೆ ಇಡಿ ದಾಳಿಯಲ್ಲಿ ಎರಡು ಕಡೆ ಕೋಟ್ಯಂತರ ರೂ. ನಗದು ಸಿಕ್ಕಿದೆ. ಇದು ಎಲ್ಲಿಂದ ಬಂತು ಎಂದು ಕೇಳಬಾರದೆ. ನಮಗೆ ಅನುಮಾನ ಇದೆ. ಈ ಹಣ ಪಂಚರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಬಳಕೆ ಮಾಡಲು ಸಂಗ್ರಹಿಸಿತ್ತು ಎಂದು ನಾವು ಆರೋಪ ಮಾಡುತ್ತೇವೆ. ಇವರು ಸತ್ಯವಂತರಾದರೆ ಆಯಿತು ಹಣ ಸಿಕ್ಕಿದೆ. ನಾವು ಸಿಬಿಐ ತನಿಖೆ ಮಾಡಿಸುತ್ತೇವೆ ಎಂದು ಏಕೆ ಹೇಳುತ್ತಿಲ್ಲ. ಹಾಗಾದರೆ ನಮ್ಮ ಅನುಮಾನ ನಿಜವಲ್ಲವೇ. ಇಂತಹ ಸರ್ಕಾರ ನಮಗೆ ಬೇಕಾ. ನಾವು ನೇರವಾಗಿ ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದರು.

ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ರಾಷ್ಟ್ರ ದ್ರೋಹದ ಕೆಲಸಗಳಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ಕೊಡಬಾರದು. ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ. ಇತ್ತೀಚಿನ ರಾಗಿಗುಡ್ಡದ ಘಟನೆಗೆ ಸಂಬಂಧಿಸಿದಂತೆ ಸಾಂತ್ವನ ಹೇಳಲು ಬಂದ ಹಿಂದೂ ನಾಯಕನನ್ನು ಬಂಧಿಸುತ್ತಾರೆ. ಇದು ನೀಚ ಕೃತ್ಯ ಅಲ್ಲವೇ. ಮೈಸೂರು ದಸರಾವನ್ನು ಇಡೀ ದೇಶವೇ ನೋಡುತ್ತದೆ. ಇಂತಹ ದಸರಾಕ್ಕೆ ಪರ್ಯಾಯವಾಗಿ ಆಚರಿಸುವ ಮಹಿಷ ದಸರಾಕ್ಕೆ ಅನುಮತಿ ಕೊಡುತ್ತಾರೆ. ಯಾರನ್ನು ಪೂಜೆ ಮಾಡಬೇಕು ಎಂಬುದೇ ಗೊತ್ತಿಲ್ಲ ಎಂದರು.

Also read: ಮಕ್ಕಳ ದಸರಾ ಸಮಾರಂಭಕ್ಕೆ ಸಂಭ್ರಮದ ತೆರೆ: ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಇಸ್ರೇಲ್ ಮತ್ತು ಪ್ಯಾಲಸ್ತೇನ್ ಯುದ್ಧ ನಡೆಯುತ್ತಿದೆ. ಭಾರತ ಇಸ್ರೇಲ್ ಪರವಾಗಿ ನಿಂತಿದೆ. ಆದರೆ ಬೆಂಗಳೂರಿನಂತಹ ನಗರದಲ್ಲಿ ಭಯೋತ್ಪಾದಕರ ಪರವಾಗಿ ಪ್ರತಿಭಟನೆ ಮಾಡುವವರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತದೆ. ಇದು ದೇಶ ದ್ರೋಹದ ಕೆಲಸವಲ್ಲವೇ. ಭಯೊತ್ಪಾದಕರು ಅಲ್ಲಿ ಆಸ್ಪತ್ರೆಗಳಿಗೇ ರಾಕೆಟ್ ಉಡಾಯಿಸಿ ಕೊಲ್ಲುವಷ್ಟು ನೀಚರಾಗಿದ್ದಾರೆ. ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಬಲಿ ತೆಗೆದುಕೊಂಡಿದ್ದು ಇದೇ ಭಯೋತ್ಪಾದಕರಲ್ಲವೇ. ಕಾಂಗ್ರೆಸ್ಸಿಗರಿಗೆ ಇದೇಕೆ ಅರ್ಥವಾಗುತ್ತಿಲ್ಲ. ಭಯೋತ್ಪಾದಕರ ಪರವಾಗಿ ಇರುವವನ್ನು ಹೆಡೆಮುರಿ ಕಟ್ಟಬೇಕಲ್ಲವೇ. ಇನ್ನೂ ಎಷ್ಟು ದಿನ ವೋಟ್ ಬ್ಯಾಂಕ್ ರಾಜಕಾರಣ ಕಾಂಗ್ರೆಸ್ ಮಾಡುತ್ತದೆ. ಇದನ್ನು ಬಿಜೆಪಿ ಸಹಿಸಿಕೊಳ್ಳುವುದಿಲ್ಲ ಎಂದ ಅವರು, ಬಹುತ್ವ ಕರ್ನಾಟಕ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದರು.

ಬಾಯಿಗೆ ಬಂದಂತೆ ಮಾತನಾಡುವ ಪ್ರೊ. ಭಗವಾನ್ ಎಲ್ಲಿಗೆ ಬೇಕಾದರೂ ಹೋಗಬಹುದು. ಆದರೆ ಸಾಂತ್ವನ ಹೇಳಲು ಮುತಾಲಿಕ್ ಬರಬಾರದೇ. ಯಾರನ್ನು ಗಡಿಪಾರು ಮಾಡಬೇಕು, ಯಾರು ರಾಷ್ಟ್ರ ದ್ರೋಹಿಗಳು, ಯಾರು ರಾಷ್ಟ್ರಭಕ್ತರು, ಯಾವುದು ದಸರಾ ಹಬ್ಬ ಈ ಕಲ್ಪನೆ ರಾಜ್ಯ ಸರ್ಕಾರಕ್ಕೆ ಇದೆಯೇ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಜಿಲ್ಲೆಯಲ್ಲಿ ಹಲವು ವಸತಿ ಯೋಜನೆಗಳ ಅಡಿಯಲ್ಲಿ ಮನೆಗಳ ನಿರ್ಮಾಣವಾಗುತ್ತಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದನಂತರ ಎಲ್ಲಾ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಬಡವರು ಸೂರಿಗಾಗಿ ಕಾಯುತ್ತಲೇ ಇದ್ದಾರೆ ಎಂದು ಹೇಳಿದರು.

ಆಶ್ರಯ, ಬಸವ, ಪ್ರಧಾನಮಂತ್ರಿ ಆವಾಸ್, ದೇವರಾಜ ಅರಸು,ಬಿ.ಆರ್. ಅಂಬೇಡ್ಕರ್, ವಾಜಪೇಯಿ, ಕೊಳಚೆ ಪ್ರದೇಶ ಮುಂತಾದ ವಸತಿ ಯೋಜನೆಗಳ ಅಡಿ ಜಿಲ್ಲೆಯಲ್ಲಿ ಸುಮಾರು 15ಸಾವಿರಕ್ಕೂ ಹೆಚ್ಚು ಜನರು ಫಲಾನುಭವಿಗಳು ಸೂರಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಈ ಎಲ್ಲಾ ಕಾಮಗಾರಿಗಳು ಮುಗಿಯುವ ಹಂತಕ್ಕೆ ಬಂದಿತ್ತು. ಚುನಾವಣೆ ಬಂದದ್ದರಿಂದ ಅಲ್ಲಿಗೆ ನಿಂತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಈ ಎಲ್ಲಾ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ತಕ್ಷಣವೇ ಅನುದಾನ ಬಿಡುಗಡೆ ಮಾಡಿ ಫಲಾನುಭವಿಗಳಿಗೆ ಮನೆಗಳನ್ನು ನೀಡಬೇಕು ಎಂದು ಇಲ್ಲದಿದ್ದಲ್ಲಿ ಬಡವರ ಪರ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಸೂರಿಗಾಗಿ ನಮ್ಮ ಅನೇಕ ಹೆಣ್ಣು ಮಕ್ಕಳು ತಾಳಿ ಮಾರಿ ಹಣ ಕಟ್ಟಿದ್ದಾರೆ. ಬಿಜೆಪಿ ಬಡವರ ಪರವಾಗಿ ನಿಲ್ಲುತ್ತದೆ. ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಯೋಜನೆಗಳ ಕಾಮಗಾರಿಗಳು ಹೇಗಿವೆ, ಎಲ್ಲಿಗೆ ನಿಂತಿವೆ, ಬಡವರ ಪರಿಸ್ಥಿತಿ ಏನು ಎಂಬುದನ್ನು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಬಂದು ಖುದ್ದಾಗಿ ಪರಿಶೀಲನೆ ನಡೆಸಲಿ. ಪರಿಸ್ಥಿತಿಯನ್ನು ಅವಲೋಕಿಸಲಿ ಆಗಲಾದರೂ ಅವರಿಗೆ ಬಡವರ ಮೇಲೆ ಕರುಣೆ ಬರಬಹುದು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ನಗರಾಧ್ಯಕ್ಷ ಜಗದೀಶ್, ಪಾಲಿಕೆ ಸದಸ್ಯ ಜ್ಞಾನೇಶ್ವರ್, ಬಾಲು, ಶಶಿಧರ್, ಅಣ್ಣಪ್ಪ ಕೆ.ವಿ. ಇದ್ದರು.

https://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ದಸರಾ ಸಮಾರಂಭಕ್ಕೆ ಸಂಭ್ರಮದ ತೆರೆ: ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Next Post

ಆರ್ಥಿಕ ಬಡತನಕ್ಕಿಂತ ಅನಾರೋಗ್ಯ ಅಪಾಯಕಾರಿ: ಡಾ. ಎಂ.ಕೆ. ಭಟ್ ಅಭಿಪ್ರಾಯ

kalpa News

kalpa News

Next Post
ಆರ್ಥಿಕ ಬಡತನಕ್ಕಿಂತ ಅನಾರೋಗ್ಯ ಅಪಾಯಕಾರಿ: ಡಾ. ಎಂ.ಕೆ. ಭಟ್ ಅಭಿಪ್ರಾಯ

ಆರ್ಥಿಕ ಬಡತನಕ್ಕಿಂತ ಅನಾರೋಗ್ಯ ಅಪಾಯಕಾರಿ: ಡಾ. ಎಂ.ಕೆ. ಭಟ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL