ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶವನ್ನು ಮುನ್ನಡೆಸುವ ಶಕ್ತಿ ಹೆಣ್ಣು ಮಕ್ಕಳಿಗೆ ಇದ್ದು, ಈ ದೃಷ್ಠಿಯಿಂದ ಗೀತಾರನ್ನು ಗೆಲ್ಲಿಸಿಕೊಡಿ ಎಂದು ನಟ ಶಿವರಾಜಕುಮಾರ್ #Shivarajkumar ಮನವಿ ಮಾಡಿದರು.
ಹೊಳೆಹೊನ್ನೂರಿನಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ದೇಶವನ್ನು ಮುನ್ನಡೆಸುವ ಶಕ್ತಿ ಹೆಣ್ಣು ಮಕ್ಕಳಿಗೆ ಇದೆ. ಹೆಣ್ಣು ಮನಸ್ಸು ಮಾಡಿದರೆ, ಏನು ಬೇಕಾದರೂ ಸಾಧಿಸಬಹುದು ಎಂದರು.
ಮಹಿಳೆಯರು ಸಾಮಾಜಿಕ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಅದೇ, ಉz್ದೆÃಶದಿಂದ ಗೀತಾ ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಜನರ ಸೇವೆಗೆ ಅವಕಾಶ ಕಲ್ಪಿಸಿಕೊಡಿ ಎಂದು ಮನವಿ ಮಾಡಿದರು.
Also read: ಗ್ಯಾರೆಂಟಿ ಯೋಜನೆಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಗೀತಾ ಶಿವರಾಜಕುಮಾರ್
ಅನ್ನ ಭಾಗ್ಯದಿಂದ ಮಾನವ ಹಕ್ಕು ರಕ್ಷಣೆ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಪ್ರತಿ ಕುಟುಂಬದ ಪ್ರತಿಯೊಬ್ಬ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ, 5 ಕೆ.ಜಿ. ಮತ್ತು 170 ನಗದು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಆಗುತ್ತಿದೆ. ಇದರಿಂದ, ಇತರ ರಾಜ್ಯಗಳಿಗೆ ಮಾದರಿಯಾಗಿ, ಮಾನವ ಹಕ್ಕುಗಳ ಗೌರವವನ್ನು ಕಾಂಗ್ರೆಸ್ ಸರ್ಕಾರ ಎತ್ತಿ ಹಿಡಿಯುತ್ತಿದೆ ಎಂದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಬಡವರು, ಕೂಲಿ ಕಾರ್ಮಿಕರ ಬದುಕಿಗೆ ಗ್ಯಾರಂಟಿ ಯೋಜನೆಗಳು ಆಶಾಕಿರಣವಾಗಿವೆ. ಬಿಜೆಪಿ ಆಡಳಿತದಲ್ಲಿ ಬಡವರ ಪರ ಯಾವುದೇ ಜನಪರ ಯೋಜನೆಗಳನ್ನು ಜಾರಿಗೆ ತರಲಿಲ್ಲ. ಇಲ್ಲಿನ ಸೋಗಾನೆ ವಿಮಾನ ನಿಲ್ದಾಣ ಕೇವಲ ಶ್ರೀಮಂತರಿಗೆ ಮಾತ್ರ. ಅದರಿಂದ, ಸಾಮಾನ್ಯರಿಗೆ ಯಾವುದೇ ಪ್ರಯೋಜನ ಇಲ್ಲ ಎಂದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಬಡವರ ಹಣ ಲೂಟಿ ಹೊಡೆಯುತ್ತಿದೆ ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ.
ಇಲ್ಲಿ ಬಿಜೆಪಿ ನಾಯಕರು ಶೇ. 40 ಕಮಿಷನ್ ಪಡೆಯುತ್ತಿದ್ದ ಹಣಕ್ಕೆ ಕತ್ತರಿ ಹಾಕಿ, ಈ ಹಣವನ್ನು ಪುನಃ ಬಡವರ ಕಲ್ಯಾಣಕ್ಕೆ ಮೀಸಲಿರಿಸಲಾಗುತ್ತಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post