ಶಿವಮೊಗ್ಗ: ಇಂದು ಬೆಳಗ್ಗೆ ಬಿಜೆಪಿ ನಗರ ಸಮಿತಿ ವತಿಯಿಂದ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೋನಾದಿಂದ ಶೀಘ್ರ ಗುಣಮುಖರಾಗಲೆಂದು ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಎನ್.ಕೆ. ಜಗದೀಶ್, ಪ್ರಮುಖರಾದ ಎನ್.ಜೆ. ನಾಗರಾಜ್, ನಗರ ಪ್ರದಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಪಾಲಿಕೆ ಸದಸ್ಯರಾದ ಪ್ರಭಾಕರ್, ಸುರೇಖಾ ಮುರಳೀಧರ್, ಕಲ್ಪನಾ ರಮೇಶ್, ಅನಿತಾ ರವಿಶಂಕರ್, ಶಿವಾಜಿ ರಾವ್, ಮೋಹನ್, ರಾಜ್ಯ ಹಿಂದುಳಿದ ಆಯೋಗದ ಸದ್ಯಸ್ಯರಾದ ಸಿ.ಎಚ್. ಮಾಲತೇಶ್, ರಾಜ್ಯ ರಸ್ತೆ ಸಾರಿಗೆ ನಿಗಮ ಸದಸ್ಯರಾದ ರುದ್ರೇಶ್, ರಾಜ್ಯ ಆಹಾರ ನಿಗಮ ಸದಸ್ಯರಾದ ಜಯರಾಮ್, ಜಿಲ್ಲಾ ಮಾಧ್ಯಮ ಪ್ರಮುಖ ಕೆ.ವಿ. ಅಣ್ಣಪ್ಪ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post