ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಮಲವಗೊಪ್ಪ ಗ್ರಾಮದಲ್ಲಿ ವಿಶಿಷ್ಟವಾಗಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ನೋಡುಗರ ಗಮನ ಸೆಳೆಯುತ್ತಿದೆ.
ಸರ್ಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಯುವಕರ ತಂಡ ಮುಂದಾಗಿದ್ದು, ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದೋದಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯನ್ನು ಉಳಿಸೋಣ #Save Government School ಎನ್ನುವ ಧ್ಯೇಯವಾಕ್ಯದೊಂದಿಗೆ ಉತ್ತಮ ಸಂದೇಶ ನೀಡುವ ಮೂಲಕ ಗಣೇಶ ಹಬ್ಬವನ್ನು #Ganesha Festival ಅರ್ಥಪೂರ್ಣವಾಗಿ ಆಚರಿಸುತ್ತಿದೆ.
Also read: ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸ್ವಚ್ಛತೆ ಕಾಪಾಡುವುದು ಅಗತ್ಯ: ಶಾಸಕ ಸುನೀಲ್ ಕುಮಾರ್
ಇನ್ನು ಗಣೇಶ ಮಂಟಪದಲ್ಲಿ ಸರ್ಕಾರಿ ಶಾಲೆಯ ಪರಿಸ್ಥಿತಿ, ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಶಾಲೆಯಿಂದ ಓದಿ ಉನ್ನತ ಹುದ್ದೆಗೆ ಏರಿದ ಅಧಿಕಾರಿಗಳು, ಸಾಹಿತಿಗಳ ಭಾವಚಿತ್ರವನ್ನು ಮಂಟಪದಲ್ಲಿ ಅಳವಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post