ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹತ್ತು ಕ್ಷೇತ್ರಗಳಲ್ಲೂ ಒಳ್ಳೆಯ ಮತಗಳನ್ನು ಪಡೆದು ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ವಿಶ್ವಾಸ ವ್ಯಕ್ತಪಡಿಸಿದರು.
ಮತದಾನದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಹತ್ತು ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಮೂರು ಹಂತದಲ್ಲಿ ಪ್ರಚಾರ ನಡೆಸಿ, ನಾಲ್ಕನೇ ಹಂತದಲ್ಲಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಗಿತ್ತು. ಎಲ್ಲಾ ತುಂಬಾ ಒಳ್ಳೆಯ ವಾತಾವರಣವಿದ್ದು, ಕಾರ್ಯತರ್ಕರ ಬೆಂಬಲ ಮತ್ತು ಸಂಘಟನಾ ಶಕ್ತಿಯಿಂದ ಈ ಚುನಾವಣೆಯನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಫೆಬ್ರವರಿಯಿಂದ ಡಿಸೆಂಬರ್‌ವರೆಗಿನ ಎಲ್ಲಾ ಚುನಾವಣೆಗಳಲ್ಲೂ ನಮ್ಮ ಬಿಜೆಪಿ ಅಭ್ಯರ್ಥಿಗಳೇ ಹೆಚ್ಚಿನ ಪ್ರಮಾಣದಲ್ಲಿ ಜಯಸಾಧಿಸಿದ್ದು, ನಗರಭೆ, ಮಹಾನಗರಪಾಲಿಕೆ ಹಾಗೂ ಪುರಸಭೆಗಳಲ್ಲಿ ಬಿಜೆಪಿ ಬಹುಮತ ಹೊಂದಿದೆ. 3000ದಷ್ಟು ಮತಗಳನ್ನು ನಾವು ಪಡೆಯಲಿದ್ದೇವೆ. ಮಾಯಕೊಂಡ ವಿಧಾಸಭಾ ಕ್ಷೇತ್ರ ಎರಡು ಜಿಲ್ಲಾ ಪಂಚಾಯತ್ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳಲ್ಲೂ ಒಳ್ಳೆಯ ವಾತಾವರಣವಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post