ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಇಂದು ಎನ್‌ಎಸ್‌ಎಸ್ ಹಾಗೂ ಐಕ್ಯೂಎಸಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸದ್ಗುರು ಆಯುರ್ವೇದ ಚಿಕಿತ್ಸಾಲಯದ ಡಾ.ಚಿತ್ರಲೇಖಾ ವಿ.ಕೃಷ್ಣ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿಶೇಷ ಉಪನ್ಯಾಸ ನೀಡಿದರು.
ಪ್ರಾಂಶುಪಾಲರಾದ ಪ್ರೊ.ಪಿ.ಎಂ.ಎನ್.ಶಂಕರ್ ಅಧ್ಯಕ್ಷತೆ ವಹಿಸುವರು. ರಾ.ಶಿ.ಸಮಿತಿಯ ನಿರ್ದೇಶಕಿ ರುಕ್ಮಿಣಿ ವೇದವ್ಯಾಸ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ, ಮಂಜುಳಾ ಎನ್. ಉಪಸ್ಥಿತರಿದ್ದರು.
ಸ್ವಚ್ಛ ಭಾರತ-ಸಮರ್ ಇಂಟರ್ನ್‌ಶಿಪ್ ಸ್ಫರ್ಧೆಯಲ್ಲಿ ನಮ್ಮ ಘಟಕಕ್ಕೆ ಪ್ರಥಮ ಬಹುಮಾನ ಬರಲು ಕಾರಣಿಕರ್ತರಾದ ಸ್ವಯಂ ಎನ್‌ಎಸ್‌ಎಸ್ ಸೇವಕಿಯರನ್ನು ಸನ್ಮಾನಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post