ನಾರಿ ಶಕ್ತಿಗೆ ಒತ್ತು ಕೊಡುವ ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಿ ಅನುಮೋದನೆಗೊಂಡಿರುವುದು ಐತಿಹಾಸಿಕ ತೀರ್ಮಾನವಾಗಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ಇಚ್ಛಾಶಕ್ತಿ ಕಾರಣ ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.
ಅವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಆಡಳಿತ ನಡೆಸಿದ್ದರೂ ಕೂಡ ಈ ಮಸೂದೆ ಜಾರಿಗೆ ತರಲಿಲ್ಲ. ಆದರೆ, ಬಿಜೆಪಿ ಸರ್ಕಾರ ಮಹಿಳಾ ಮೀಸಲಾತಿ ಜಾರಿಗೆ ತಂದಿದೆ. ಸಂಸತ್ ನಲ್ಲಿ ಈಗಾಗಲೇ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಾಯುತ್ತಿದೆ ಅಷ್ಟೇ. ಅನೇಕ ವರ್ಷಗಳ ಕನಸು ಇದು. ಈ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಅಭಿನಂದನೆಗಳು ಎಂದರು.
ಈ ಮಸೂದೆಯಿಂದ ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬನೆ ಹೆಚ್ಚಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರ ಮತದಾನ ಕೂಡ ಶೇಕಡ 5 ರಷ್ಟು ಹೆಚ್ಚಳವಾಗಿದೆ. ಮಹಿಳೆಯರ ಮತದಾನ ಕೂಡ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಹಲವು ಯೋಜನೆ ರೂಪಿಸಿದೆ. ಬಿಜೆಪಿ ಸರ್ಕಾರ ಹೆಮ್ಮೆಯ ನಿರ್ಧಾರವಿದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post