ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೆಕ್ಯಾನಿಕಲ್ ಔದ್ಯೋಗಿಕ ಕ್ಷೇತ್ರದಲ್ಲಿ ಜರುಗುತ್ತಿರುವ ಪ್ರಾಯೋಗಿಕ ಚಾಕಚಕ್ಯತೆಗಳ ಬಗ್ಗೆ ವಿಶೇಷ ದೃಷ್ಟಿಕೋನ ಹಾಗೂ ಕಾರ್ಯತತ್ವರತೆಯನ್ನು ಹೊಂದುವಲ್ಲಿ ಕಾರ್ಯೋನ್ಮುಖರಾಗಿ ಎಂದು ಬೆಂಗಳೂರಿನ ಕಾರ್ಗಿಲ್ ಬಿಸಿನೆಸ್ ಸರ್ವಿಸಸ್ ಸಂಸ್ಥೆಯ ಪ್ರಾಡಕ್ಟ್ ಓನರ್ ಮಹದೇವಸ್ವಾಮಿ ತಿಳಿಸಿದರು.
ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಮೆಕಾನಿಕಲ್ ವಿಭಾಗದ ಮೆಕ್ ಇನೋವಾ ಫೋರಂ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ತಾಂತ್ರಿಕ ಚರ್ಚೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅನವರತ ಔದ್ಯೋಗಿಕ ಕ್ಷೇತ್ರದಲ್ಲಿ ಸದಾಕಾಲ ಜರುಗುವ ತಾಂತ್ರಿಕ ಗುಣಮಟ್ಟವುಳ್ಳ ಪ್ರಯೋಗಗಳ ಬಗ್ಗೆ ಸದಾಕಾಲ ಚಿಂತಿಸುವ ಹಾಗೂ ಅವುಗಳನ್ನು ಪ್ರಾಯೋಗಿಕ ಮಟ್ಟದಲ್ಲಿ ಅಳವಡಿಸಿಕೊಳ್ಳುವ ಚಾಕಚಕ್ಯತೆಯನ್ನು ಹಾಗೂ ತಮ್ಮ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸೂಕ್ತವೆನಿಸಬಹುದಾದಂತಹ ತಂತ್ರಜ್ಞಾನಗಳ ಕುರಿತಾದ ಮೂಲಭೂತ ಮಾಹಿತಿಗಳನ್ನು ಪಡೆದುಕೊಳ್ಳುವುದರ ಕಡೆಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಶ್ರಮಿಸಬೇಕು. ತಮ್ಮ ಕಾರ್ಯಕ್ಷೇತ್ರದಲ್ಲಿ ಅನುಭವಿಸಿದ ಹಲವು ಸಂದರ್ಭಗಳನ್ನು ವಿವರಿಸಿದ ಅವರು, ಲೀನ್ ಮ್ಯಾನುಫ್ಯಾಕ್ಚರಿಂಗ್ ಎಂಬ ತಂತ್ರಜ್ಞಾನದ ಬಗ್ಗೆ ಹಲವು ಉಪಯುಕ್ತ ಮಾಹಿತಿಗಳನ್ನು ನೀಡಿದರು.

Also read: ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಮೇಲೆ ಜಿಹಾದಿಗಳ ದೌರ್ಜನ್ಯ | ಎಬಿವಿಪಿ ಪ್ರತಿಭಟನೆ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಗಿರೀಶ ಮಾತನಾಡಿ, ಈ ರೀತಿಯ ತಾಂತ್ರಿಕ ಚರ್ಚಾ ಕಾರ್ಯಗಾರಗಳು ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಜರುಗುತ್ತಿರುವ ಪ್ರಯೋಗಗಳ ಆಮೂಲಾಗ್ರ ಮಾಹಿತಿಯನ್ನು ಪಡೆದುಕೊಳ್ಳುವಲ್ಲಿ ಒಂದು ಉತ್ತಮ ವೇದಿಕೆಯಾಗಿ ಕಾರ್ಯನಿರ್ವಹಿಸುವಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ. ವಿದ್ಯಾರ್ಥಿಗಳು ತಮ್ಮ ಔದ್ಯೋಗಿಕ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡುವ ದೃಷ್ಟಿಕೋನವನ್ನು ಬೆಳೆಸಿಕೊಂಡು ಈ ಬಗೆಯ ಕಾರ್ಯಾಗಾರಗಳಿಂದ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಹುರಿದುಂಬಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post