ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕನೋರ್ವ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.
ಮಂಜಾನಾಯ್ಕ (೨೨) ಮೃತ ಕಾರ್ಮಿಕ. ಶ್ರೀರಾಂಪುರದಲ್ಲಿ ಅಡಿಕೆ ತೋಟವೊಂದರಲ್ಲಿ ಮಂಜಾನಾಯ್ಕ್ ಕೆಲಸ ಮಾಡುತ್ತಿದ್ದ ಎರಡು ದಿನದ ಹಿಂದೆ ತೋಟದಲ್ಲಿ ಔಷಧಿ ಸಿಂಪಡಿಸುವಾಗ ಹೊಟ್ಟೆನೋವು ಶುರುವಾಗಿತ್ತು ಎನ್ನಲಾಗಿದೆ.
ಅದೇ ದಿನ ಸಂಜೆ ಗಾಡಿಕೊಪ್ಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಮರಳಿದ ನಂತರ ರಕ್ತವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಾರೆ.
ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















