ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸರ್ವಸದಸ್ಯರ ಮಹಾ ಸಭೆಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ, ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರಸ್‌ಟ್ರಸ್ಟ್ ನಡುವಿನ ಸಣ್ಣ ಪ್ರಮಾಣದ ಅಂತರ ನಿವಾರಣೆಯಾದ ನಂತರ ಮೊದಲ ಬಾರಿಗೆ ಜಂಟಿಯಾಗಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಟ್ರಸ್ಟ್‌ನ ಅಧ್ಯಕ್ಷರಾದ ಎನ್. ಮಂಜುನಾಥ್ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ. ವಿ. ಶಿವಕುಮಾರ್ ಅವರು, ಯಾವುದೇ ಸಂಘವು ಯಶಸ್ವಿಯಾಗಿ, ಸಮರ್ಥವಾಗಿ ಕಾರ್ಯ ನಿರ್ವಹಿಸಲು, ಸದಸ್ಯರ ಸಹಭಾಗಿತ್ವ ಅತ್ಯಂತ ಅಗತ್ಯ ಹಾಗೂ ಅನಿವಾರ್ಯ ಎಂದರು.
ಸಂಘವು ಅನೇಕ ಯೋಜನೆಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಸರ್ಕಾರದ ಮಟ್ಟದಲ್ಲಿಯೂ ಸಹ ಪ್ರಯತ್ನಗಳು -ಫಲಪ್ರದವಾಗಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಕಾರ ಹಾಗೂ ಸಂಘದ ಯೋಜನೆಗಳು ಸದಸ್ಯರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಕೊರೋನಾ ಸೇರಿದಂತೆ ವಿವಿಧ ಅಡಚಣೆಗಳು ಇದ್ದಾಗಲೂ ಸಂಘವು ರಚನಾತ್ಮಕವಾಗಿ ಕಾರ್ಯನಿರ್ವಹಿಸಿ, ಉಪಯುಕ್ತವಾದ ಕಾರ್ಯಾಗಾರಗಳು, ಆರೋಗ್ಯ ಶಿಬಿರಗಳನ್ನು ಸಂಘಟಿಸಲಾಗಿದೆ. ಹಾಗೂ ಮುಂದಿನ ದಿನಗಳಲ್ಲಿ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ತಾಲೂಕು ಸಂಘಗಳ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದ ಪ್ರಸ್ ಟ್ರಸ್ಟ್‌ನ ಅಧ್ಯಕ್ಷ ಎನ್. ಮಂಜುನಾಥ್, ಸಮರ್ಥವಾದ ಸಂಘಟನೆಯಿಂದ ಮಾತ್ರ ಸದಸ್ಯರ ಹಿತ ಕಾಯಲು ಸಾಧ್ಯ. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಅಡೆತಡೆಗಳ ನಡುವೆಯೂ ಸಹ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ಪ್ರಶಂಶಿಸಿದರು.
ಸಂಘ ಹಾಗೂ ಟ್ರಸ್ಟ್ ನಡುವೆ ಇದ್ದ ಗೊಂದಲಗಳೆಲ್ಲವೂ ಪರಿಹಾರವಾಗಿದೆ. ಈ ಕುರಿತಾಗಿ ಮುಕ್ತ ಚರ್ಚೆ ನಡೆಸಲಾಗಿದೆ. ಗೊಂದಲಗಳು ಈಗ ಮುಗಿದ ಅಧ್ಯಾಯ. ತಾಲೂಕಿನ ಪತ್ರಕರ್ತ ಮಿತ್ರರು, ಈ ಪತ್ರಿಕಾ ಭವನಕ್ಕೆ ಭೇಟಿ ನೀಡಬೇಕು. ಇದನ್ನು ಬಳಸಿಕೊಳ್ಳುವಲ್ಲಿ ಮುಂದಾಗಬೇಕು ಎಂದು ಮನವಿ ಮಾಡಿದರು.
ತಾವು ಈ ಹಿಂದೆ ಸಂಘದ ವಿವಿಧ ಹಂತದ ಪzಧಿಕಾರಿಯಾಗಿ ಕರ್ತವ್ಯ ನಿಭಾಯಿಸಿದ್ದನ್ನು ನೆನಪಿಸಿಕೊಂಡ ಅವರು, ಸಂಘವನ್ನು ಕಟ್ಟಲು ಹಿರಿಯರ ಶ್ರಮ ಮಹತ್ವದ್ದು. ಸಮಷ್ಟಿ ಪ್ರಯತ್ನದಿಂದ ಈ ಎಲ್ಲ ಹಿರಿಯರ ಶ್ರಮಕ್ಕೆ ಚ್ಯುತಿ ಬಾರದಂತೆ ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸೋಣ ಎಂದರು.
ಸಭೆಯಲ್ಲಿ ಟ್ರಸ್ಟ್‌ನ ಹಿರಿಯ ಪತ್ರಕರ್ತ ಶೃಂಗೇಶ್, ಸೂರ್ಯನಾರಾಯಣ, ಗಿರೀಶ್ ಉಮ್ರಾಯ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ವೈದ್ಯ ಸ್ವಾಗತಿಸಿದರು. ಗ್ರಾಮಾಂತರ ಕಾರ್ಯದರ್ಶಿ ದೀಪಕ್ ಸಾಗರ್ ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post