ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ #Jogfalls ತೆರಳುವ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಮತ್ತೆ ಬೇಸರದ ಸುದ್ದಿ ಇದಾಗಿದೆ.
ಹೌದು… ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.
Also Read: ಸರ್ವ ದಿಶೆಯಲ್ಲೂ ಸ್ಯಾಂಡಲ್ ವುಡ್ ಬದಲಾವಣೆ ಕಂಡಿದೆ | ನಟ ಅನಂತನಾಗ್ ಅನಿಸಿಕೆ
ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಆದರೆ, ಮಾರ್ಚ್ 15 ರ ವೇಳೆಗೂ ಜೋಗ ಜಲಪಾತದ ಮುಖ್ಯ ದ್ವಾರದ ಕಾಮಗಾರಿಯು ಪೂರ್ಣಗೊಳ್ಳದೇ ಇರುವುದರಿಂದ ಏ.30 ರವರೆಗೆ ಮುಚ್ಚಲಾಗಿದೆ. ಆದ್ದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-251444 ಸಂಪರ್ಕಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post