ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪ್ರಸ್ತುತ ರಾಜ್ಯದಲ್ಲಿರುವ ಸಂಕಷ್ಟದ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದು ಅತಿಶಯೋಕ್ತಿ ಅಲ್ಲ. ಹಾಗೂ ಬದಲಾವಣೆಯ ಅವಶ್ಯಕತೆಯಿಲ್ಲ ಎಂದು ಆನಂದಪುರಂ ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಸ್ವಾಮಿಜೀ ಅಭಿಪ್ರಾಯಪಟ್ಟಿದ್ದಾರೆ.
ಶಿಕಾರಿಪುರ ತಾಲೂಕು ಕಾಳೇನಹಳ್ಳಿ ರೇವಣ್ಣ ಸಿದ್ದೇಶ್ವರ ಮಠದಲ್ಲಿ ನಡೆದ ಮಲೆನಾಡಿನ ಮಠಾಧೀಶರ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿದರು. ಅದರ ಬೆನ್ನಲ್ಲೆ ಕೋವಿಡ್‌ನಂತಹ ಸಂಕಷ್ಟದ ಸಮಯವನ್ನು ಧೃತಿಗೆಡದೆ ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯವನ್ನು ಶ್ಲಾಘಿಸಿದರು.
ರಾಜ್ಯಕ್ಕೆ ಎಂತಹ ನಾಯಕತ್ವ ಬೇಕು ಎಂಬುದನ್ನು ಬಗ್ಗೆ ಜನರೇ ನಿರ್ಧರಿಸಬೇಕು. ಎಷ್ಟೇ ಅಡೆತಡೆಗಳು ಬಂದರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅದನ್ನು ಸರಿಪಡಿಸಿಕೊಂಡು ಮುನ್ನಡೆಯಬೇಕು. ಅವರ ಶ್ರೇಯೋಭಿವೃದ್ಧಿಗಾಗಿ ನಾವೆಲ್ಲಾ ಮಠಾಧೀಶರು ಒಳಿತನ್ನು ಹಾರೈಸುತ್ತೇವೆ. ಹಾಗೂ ಅವರ ನಾಯಕತ್ವಕ್ಕೆ ಅಡ್ಡಿಪಡಿಸುವಂತಹ ಕೆಲಸಗಳನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದರು.
ರಾಜ್ಯದ ನಾಡು, ನುಡಿಯ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಸೇವೆಯ ಅಗತ್ಯವಿದೆ. ಅವರ ಆಸೆ-ಆಕಾಂಕ್ಷೆಗಳನ್ನು ಸಂಸದ ಬಿ.ವೈ. ರಾಘವೇಂದ್ರ ಉತ್ತಮವಾಗಿ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತಿದ್ದು, ಮತ್ತಷ್ಟು ಕೆಲಸಗಳು ಬಾಕಿ ಇದೆ. ಈ ಎಲ್ಲಾ ಕೆಲಸಗಳನ್ನು ಅವರು ಸಮರ್ಥವಾಗಿ ಪೂರೈಸಬೇಕು ಎಂದು ಹಾರೈಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post