ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಥ್ರೂಬಾಲ್ ಸಂಸ್ಥೆ ವತಿಯಿಂದ ಬಿ.ಎಸ್. ಯಡಿಯೂರಪ್ಪನವರ Yadiyurappa 80ನೇ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿಯನ್ನು ಫೆ.27ರಂದು ಬೆಳಿಗ್ಗೆ 10ಕ್ಕೆ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪೋಷಕ ಸಂತೋಷ್ ಬಳ್ಳಕೆರೆ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಪಂದ್ಯಾವಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುವರು. ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಡಿ.ಎಸ್.ಅರುಣ್, ಎಸ್.ಎನ್. ಚನ್ನಬಸಪ್ಪ, ಎಸ್. ರುದ್ರೇಗೌಡ ಉಪಸ್ಥಿತರಿರುವರು, ಸಮಾರೋಪ ಸಮಾರಂಭ ಸಂಜೆ 6.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಮಾಲತೇಶ್, ಬಿ.ಎಚ್.ನಿರಂಜನಮೂರ್ತಿ ಮತ್ತು ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದರು.
ವಾಲಿಬಾಲ್ ಸಂಸ್ಥೆಯ ಖಜಾಂಚಿ ಕೆ.ಎಸ್.ಶಶಿ ಮಾತನಾಡಿ, ಹಗಲು ಮತ್ತು ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ಮಹಿಳೆಯರು ಮತ್ತು ಪುರುಷರ ತಲಾ 15 ತಂಡಗಳು ಭಾಗವಹಿಸಲಿವೆ. ವಿಜೇತ ತಂಡಗಳಿಗೆ ಪ್ರಥಮ ಬಹುಮಾನ 10 ಸಾವಿರ, ಎರಡನೇ ಬಹುಮಾನ 8 ಸಾವಿರ ಹಾಗೂ 3ನೇ ಬಹುಮಾನ 5 ಸಾವಿರ ಮತ್ತು ನಾಲ್ಕನೇ ಬಹುಮಾನ 3 ಸಾವಿರ ನೀಡಲಾಗುವುದು ಎಂದರು.
Also read: ಫೆ.27: ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ: ನಿವೃತ್ತ ನ್ಯಾ. ಸಂತೋಷ್ ಹೆಗ್ಗಡೆ ಭಾಗಿ
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಮಚಂದ್ರಪ್ಪ ಹೆಚ್.ತಿಮ್ಮೇನಹಳ್ಳಿ, ಕೆ.ಜಿ.ಮಠಪತಿ, ಅಂಬಿಕಾ, ವೀಣಾ ಪ್ರವೀಣ್, ರಾಜೇಶ್ವರಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post