ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ Shivamogga Airport ತಮ್ಮ ಹೆಸರು ಬೇಡ. ತಮಗಿಂತಲೂ ಹೆಚ್ಚಿನ ಸಾಧನೆ ಮಾಡಿದವರ ಹೆಸರನ್ನು ಇಡಿ, ಕಾಮಗಾರಿಗಳನ್ನು ಶೀಘ್ರ ಮುಗಿಸಲು ಅಗತ್ಯದ ಅನುದಾನವನ್ನು ಬಿಡುಗಡೆ ಮಾಡಿ ಎಂಬಿತ್ಯಾದಿ ಅಮೂಲ್ಯ ಸಲಹೆ ನೀಡಿ ದೊಡ್ಡತನ ಮತ್ತು ಹೃದಯ ಶ್ರೀಮಂತಿಕೆ ತೋರಿದ ಹಿರಿಯ ಬಿ.ಎಸ್. ಯಡಿಯೂರಪ್ಪ B S Yadiyurappa ಅವರ ನಡೆ ಪ್ರಶಂಸನಾರ್ಹ ಎಂದು ಮಾಜಿ ಶಾಸಕ ಕೆ. ಬಿ. ಪ್ರಸನ್ನ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಆದರೆ ಯಡಿಯೂರಪ್ಪ ತಮ್ಮ ಹೆಸರು ಬೇಡ. ಬೇರೆ ಯಾರಾದರೂ ಸಾಧಕರ ಹೆಸರು ಇಡುವಂತೆ ಸಲಹೆ ನೀಡಿದ್ದರು.
Also read: ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ದಾಳಿ: ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post