ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಬಲಿಜ ಸಂಘದ ವತಿಯಿಂದ ಶ್ರೀ ಯೋಗಿನಾರಯಣೇ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಪ್ರಮುಖರು, ಬಲಿಜ ಸಮುದಾಯ ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, ಈ ಹಿಂದೆ ಮೀಸಲಾತಿಯಿಂದ ವಂಚಿತರಾಗಿ ಪುನಃ ಹೋರಾಟದ ಮೂಲಕ ಮೀಸಲಾತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ನಮ್ಮ ಹೋರಾಟ ಮುಂದುವರೆಯಬೇಕಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸಮುದಾಯ ಗುರುತಿಸಿಕೊಳ್ಳುವಂತಾಗಬೇಕು. ಮೊದಲು ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಬೇಕು. ಶೈಕ್ಷಣಿಕವಾಗಿ, ರಾಜಕೀಯ ಹಾಗು ಸಾಮಾಜಿಕವಾಗಿ ಪ್ರಗತಿ ಸಾಧಿಸಬೇಕಾಗಿದೆ ಎಂದರು.
ಸಮುದಾಯಕ್ಕೆ ದಾರಿದೀಪವಾಗಿರುವ ತಾತಯ್ಯನವರ ಸಂದೇಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಮುನ್ನಡೆಯಬೇಕು. ಅಲ್ಲದೆ ಸಮುದಾಯದಲ್ಲಿ ಮುಂದೆ ಬಂದವರು ಹಿಂದುಳಿದವರ ನೆರವಿಗೆ ಮುಂದಾಗಬೇಕು. ಸರ್ಕಾರ ತಾತಯ್ಯನವರ ಜಯಂತಿಯನ್ನು ಆಚರಿಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Also read: ಅನಾರೋಗ್ಯದಿಂದ ಶಾಸಕ ಸಂಗಮೇಶ್ವರ್ ಚೇತರಿಕೆ: ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಸೀತಾರಾಮ್
ಕಾರ್ಯಕ್ರಮದಲ್ಲಿ ಶಿವಮೊಗ್ಗ, ಸಾಗರ, ಶಿಕಾರಿಪುರ, ಭದ್ರಾವತಿ, ಹೊಸನಗರ ಸೇರಿದಂತೆ ಎಲ್ಲ ತಾಲೂಕುಗಳಿಂದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post