ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಎನ್‌ಎಸ್‌ಯುಐ ಜಿಲ್ಲಾ ಘಟಕದ ವತಿಯಿಂದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಭದ್ರಾವತಿ ಯುವ ಮುಖಂಡ ಗಣೇಶ್ ಚಾಲನೆ ನೀಡಿದರು.
ವಿದ್ಯಾನಗರದ ಬೈಪಾಸ್ ರಸ್ತೆಯಲ್ಲಿರುವ ಅಲೆಮಾರಿ ನಿವಾಸಿಗಳಿಗೆ ಆಹಾರ ಕಿಟ್ ವಿತರಣೆ ಮಾಡಿ ಮಾತನಾಡಿದ ಗಣೇಶ್, ಕೊರೋನಾ ಜನರನ್ನು ಸಾಕಷ್ಟು ಸಂಕಷ್ಟಕ್ಕೀಡು ಮಾಡಿದೆ. ಇಂತಹ ಸಂದರ್ಭದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಹಸಿದವರಿಗೆ ಸಹಾಯಹಸ್ತ ಕಾರ್ಯಕ್ರಮ ಹಮ್ಮಿಕೊಂಡು ಬಂದಿದೆ. ಅದರ ಮುಂದುವರೆದ ಭಾಗವಾಗಿ ಇಂದು ಎನ್‌ಎಸ್‌ಯುಐ ಅಗತ್ಯವಿರುವವರಿಗೆ ಆಹಾರದ ಕಿಟ್ ವಿತರಿಸುತ್ತಿದೆ ಎಂದರು.

ಕಾಂಗ್ರೆಸ್ ಎಂದಿಗೂ ಜನಪರವಾಗಿದ್ದು, ಜನರು ಸಂಕಷ್ಟದಲ್ಲಿರುವಾಗ ನೆರವಾಗುವ ಸಂಸ್ಕೃತಿ ರೂಢಿಸಿಕೊಂಡಿದೆ. ಇಂದು ಎನ್‌ಎಸ್‌ಯುಐ ವತಿಯಿಂದ ನಡೆಸುತ್ತಿರುವ ಈ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಬಾಲಾಜಿ, ನಗರಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ, ಪ್ರಮುಖರಾದ ವಿನಯ್, ಗಿರೀಶ್, ಪ್ರಮೋದ್, ಶಿವು, ಆಕಾಶ್, ಚಂದೋಜಿರಾವ್, ಅಬ್ದುಲ್ಲಾ, ಪುರಲೆ ಮಂಜು, ಧನರಾಜ್, ಸಂದೀಪ್, ಭರತ್, ಅನಿಲ, ಅರುಣ, ಗೌತಮ್, ಸಂದೇಶ, ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಕೆ. ಚೇತನ್, ಯುವಮುಖಂಡ ಸಿ.ಜೆ. ಮಧುಸೂಧನ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















