ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಯುವ ಪ್ರೇಮಿಗಳಿಬ್ಬರು ಇಂದು ಬೈಪಾಸ್ ರಸ್ತೆಯ ಹೊಸ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಇಬ್ಬರೂ ಕೈಗೆ ವೇಲ್ ಕಟ್ಟಿಕೊಂಡು ನದಿಗೆ ಹಾರಿದ್ದಾರೆ. ವಿಷಯ ತಿಳಿದು ತತಕ್ಷಣವೇ ಸ್ಥಳಕ್ಕೆ ಆಗಮಿಸಿದ ತುಂಗಾ ನಗರ ಠಾಣೆ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಯುವತಿಯನ್ನು ರಕ್ಷಿಸಿ, ಆಕೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದ್ದರೂ, ಅಧಿಕೃತ ಮೂಲಗಳು ಖಚಿತಪಡಿಸಿಲ್ಲ.

ಇನ್ನು, ನೀರಿನಲ್ಲಿ ಕಣ್ಮೆರೆಯಾಗಿರುವ ಯುವಕನಿಗಾಗಿ ಶೋಧ ಕಾರ್ಯ ನಡೆದಿದೆ.
ನದಿಗೆ ಹಾರಿದ ಪ್ರೇಮಿಗಳನ್ನು ಅನುಷಾ(19) ಹಾಗೂ ಸಂತೋಷ್(22) ಎಂದು ಗುರುತಿಸಲಾಗಿದ್ದು, ಹಸೂಡಿ ಗ್ರಾಮದವರು ಎಂದು ಹೇಳಲಾಗಿದೆ.
Get In Touch With Us info@kalpa.news Whatsapp: 9481252093















