ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಾಡಹಗಲೇ ನಡುರಸ್ತೆಯಲ್ಲಿ ಯುವತಿಗೆ ಚಾಕು ಇರಿದ ಪರಿಣಾಮ ಯುವಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಹಾಡೋನಹಳ್ಳಿಯ ನಿವಾಸಿಗಳಾದ ಚೇತನ್(29) ಮತ್ತು ಅಂಬಿಕಾ(22) ಪ್ರೀತಿಸಿ ಬೇರೆಯಾಗಿದ್ದು, ಇಂದು ಮಧ್ಯಾಹ್ನ ಚೇತನ್, ಅಂಬಿಕಾನನ್ನ ನೋಡಿ ಚಾಕುವಿನಿಂದ ಇರಿದಿದ್ದಾನೆ.
ಯುವತಿಗೆ ಇರಿದ ಯುವಕನಿಗೆ ಸಾರ್ವಜನಿಕರೇ ಥಳಿಸಿದ್ದಾರೆ. ಚಾಕು ಇರಿತಕ್ಕೊಳಗಾದ ಯುವತಿ ಹಾಗೂ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಮಕರ ಸಂಕ್ರಮಣ ಹಿನ್ನೆಲೆ: ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ
ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post