ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ನಾಡು ನುಡಿಯ ರಕ್ಷಣೆಗಾಗಿ ಹೋರಾಡಿದವರನ್ನು ಸ್ಮರಿಸುತ್ತಾ ಮುಂದಿನ ದಿನಗಳಲ್ಲಿ ನಾಡು, ನುಡಿ, ಜಲ, ಭಾಷೆ ರಕ್ಷಣೆಗೆ ಎಲ್ಲ ಯುವಕರು ಪಣತೊಟ್ಟು ನಿಲ್ಲಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಹೇಳಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರಸ್ತೆ (ಜೈಲ್ ರಸ್ತೆ)ಯ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಿಂದ ಏರ್ಪಡಿಸಲಾಗಿದ್ದ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ನಮ್ಮೆಲ್ಲರ ನೆಚ್ಚಿನ ಡಾ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಎಲ್ಲ ಕನ್ನಡಿಗರಲ್ಲೂ ಅತ್ಯಂತ ಸಂತೋಷವಾಗಿದೆ. ಅದರ ಜೊತೆಗೆ ಮುಂದಿನ ದಿನಗಳಲ್ಲಿ ಭಾರತ ಸರ್ಕಾರ ಅಪ್ಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಯುವಕರ ಸಂಘದ ಅಧ್ಯಕ್ಷ ಚಂದ್ರು ಗೆಡ್ಡೆ, ಯುವ ಮುಖಂಡ ಕೆ. ರಂಗನಾಥ್, ಹೆಚ್.ಪಿ. ಗಿರೀಶ್, ಸಂಘದ ಪದಾಧಿಕಾರಿಗಳಾದ ನಾಗರಾಜ್ ಗೆಡ್ಡೆ, ಅಶೋಕ್, ಪ್ರಕಾಶ್ , ಪಾರ್ಥ ಸಾರಥಿ, ಪವನ್, ಮನೋಜ್, ಚೇತನ್, ಪ್ರಜ್ವಲ್, ಇನ್ನಿತರರಿದ್ದರು.
67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರವಿಂದನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಸ್. ತಂಗರಾಜ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ರವಿಕುಮಾರ್, ಖಜಾಂಚಿ ಎಂ. ಗಿರೀಶ್, ಉಪಾಧ್ಯಕ್ಷ ಎಲ್. ಕೆ. ನಾಗರಾಜ್, ಬಸವರಾಜ್, ಟಿ.ವಿ. ನಾಗರಾಜ್, ಸುರೇಶ್ ಹಾಗೂ ಗೆಳೆಯರ ಬಳಗದ ಎಲ್ಲರೂ ಭಾಗವಹಿಸಿದ್ದರು.
ಕರ್ನಾಟಕ ರತ್ನ ಪ್ರಶಸ್ತಿ ವಿಜೇತ ಡಾ.ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು ಶಿವಮೊಗ್ಗ ನಗರದ ವಿನೋಬನಗರ ಶಿವಾಲಯ ದೇವಸ್ಥಾನದ ಮುಂಭಾಗದ ಸಿಹಿಮೋಗೆ ಕನ್ನಡ ಯುವಕರ ವೇದಿಕೆಯಿಂದ ಕನ್ನಡ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಆಚರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post