ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ದುರ್ಗಿಗುಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಒಟ್ಟಾರೆಯಾಗಿ 10 ಪದಕಗಳನ್ನು ಬಾಚಿಕೊಂಡಿದ್ದಾರೆ.
ನೆಹರೂ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ವಲಯಮಟ್ಟದ ಕ್ರೀಡಾಕೂಟದಲ್ಲಿ ನಗರದ ದುರ್ಗಿಗುಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಬಾಲಕರ ವಿಭಾಗದಲ್ಲಿ ಖೊಖೊ ದ್ವಿತೀಯ ಸ್ಥಾನ, ಥ್ರೋಬಾಲ್ ಆಟದಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ಖೊಖೊ ಆಟದಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಒಟ್ಟಾರೆ ಹತ್ತು ಪದಕಗಳನ್ನು ಗೆದ್ದು ಶಾಲೆಗೆ ಹಾಗೂ ಶಿವಮೊಗ್ಗ ನಗರಕ್ಕೆ ಕೀರ್ತಿ ತಂದಿದ್ದಾರೆ.

Also read: ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ – ಟೂರಿಸಂ ಹಬ್ ಮಾಡಲು ಪಣ: ಸಚಿವ ಡಾ. ನಾರಾಯಣಗೌಡ
ಸರ್ಕಾರಿ ಶಾಲೆಗಳೆಂದರೆ ಅನಾಧರ ತೋರುವವರಿಗೆ ತಕ್ಕ ಉತ್ತರ ನೀಡಿರುವ ನಮ್ಮ ಮಕ್ಕಳು ಇನ್ನೂ ಹೆಚ್ಚಿನ ತರಬೇತಿಗೆ ಅವಕಾಶ ದೊರೆತಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಶಕ್ತರಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.











Discussion about this post