No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಸಗೊಬ್ಬರ ಖರೀದಿಸುವಾಗ ರೈತರು ಜಾಗ್ರತೆ ವಹಿಸಬೇಕು: ಡಾ. ಗಣಪತಿ ಸಲಹೆ

ಕಲಬೆರಿಕೆ ರಸಗೊಬ್ಬರ ಪತ್ತೆ ಹಚ್ಚುವುದು ಹೇಗೆ? ಗುಂಪು ಚರ್ಚೆ, ಪ್ರಾತ್ಯಕ್ಷಿಕೆ

kalpa News by kalpa News
January 2, 2025
in ಶಿವಮೊಗ್ಗ
0
ರಸಗೊಬ್ಬರ ಖರೀದಿಸುವಾಗ ರೈತರು ಜಾಗ್ರತೆ ವಹಿಸಬೇಕು: ಡಾ. ಗಣಪತಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಲಬೆರಿಕೆಯಾಗಿ ಮಾರುಕಟ್ಟೆಗೆ ಬರುತ್ತಿದೆ ರೈತ ಕೊಳ್ಳುವ ರಾಸಾಯನಿಕ ಗೊಬ್ಬರವನ್ನು ಕಲಬೆರಿಕೆ ಮಾಡಿ ಮಾರಾಟ ಮಾಡಲಾಗುತ್ತಿದೆ. ರಸಗೊಬ್ಬರ ಖರೀದಿಸುವಾಗ ರೈತರು ಜಾಗ್ರತೆ ವಹಿಸಬೇಕು ಎಂದು ಮಣ್ಣು ವಿಜ್ಞಾನಿ ಡಾ. ಗಣಪತಿ ಹೇಳಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಶಿವಮೊಗ್ಗ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ಹಳೇಮುಗಳಗೆರೆಯಲ್ಲಿ ರಸಗೊಬ್ಬರಗಳ ಕಲಬೆರಿಕೆ ಪತ್ತೆ ಹಚ್ಚುವುದು ಹೇಗೆ ಎಂದು ಗುಂಪು ಚರ್ಚೆ ಮತ್ತು ಪದ್ಧತಿ ಪ್ರಾತ್ಯಕ್ಷಿಕೆ ನಡೆಸಲಾಯಿತು.
ರಸಗೊಬ್ಬರ ಕೊಳ್ಳುವಾಗ ಗಮನಿಸಬೇಕಾದ ಅಂಶಗಳು

  • ರಸಗೊಬ್ಬರ ಚೀಲದ ಬಾಯಿ ಹೊಲೆದಿರಬೇಕು. ಕೈಯಿಂದ ಹೊಲೆದಿದ್ದರೆ ಅದಕ್ಕೆ ಸೀಸದ ಮೊಹರಿರಬೇಕು.
  • ಚೀಲವನ್ನು ತೂಕ ಮಾಡಿಸಿಯೇ ಕೊಳ್ಳಬೇಕು.
  • ಚೀಲದ ಮೇಲೆ ನಮೂದಿಸಿರುವ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆ ನೀಡಬಾರದು ಮತ್ತು ಕೊಂಡಿದ್ದಕ್ಕೆ ನಮೂನೆ ಎಂ.ನಲ್ಲಿ ರಸೀತಿ ಪಡೆಯಬೇಕು. ಇದರಲ್ಲಿ ಖರೀದಿಯ ವಿವರಗಳನ್ನು ಸ್ಪಷ್ಟವಾಗಿ ನಮೂದಿಸಿದ್ದು ರೈತರ ಮತ್ತು ಮಾರಾಟಗಾರರ ಸಹಿಯಿರಬೇಕು.
  • ಚೀಲದ ಮೇಲೆ ರಸಗೊಬ್ಬರದ ಹೆಸರು, ತಯಾರಕರ ಹೆಸರು ಮತ್ತು ವಿಳಾಸ, ಬ್ರಾಂಡ್, ಪೋಷಕಾಂಶಗಳ ವಿವರ, ಗರಿಷ್ಠ ಮಾರಾಟ ಬೆಲೆ, ಗರಿಷ್ಠ ಮತ್ತು ನಿವ್ವಳ ತೂಕ, ಬ್ಯಾಚ್ ಸಂಖ್ಯೆ ಮತ್ತು ರಿಜಿಸ್ಟ್ರೇಷನ್ ಸಂಖ್ಯೆ~ ಇರುವುದನ್ನು ಗಮನಿಸಬೇಕು.
  • ಪ್ರಾಥಮಿಕ ಹಂತದಲ್ಲಿಯೇ ಈ ವಿವರ ಪರೀಕ್ಷಿಸಿ ಅಧಿಕೃತ ಮಾರಾಟಗಾರರಿಂದ ಮಾತ್ರ ಕೊಂಡರೆ ನಕಲಿ ಹಾಗೂ ಕಲಬೆರಕೆ ಹಾವಳಿಯನ್ನು ಸ್ವಲ್ಪ ಮಟ್ಟಿಗೆ ತಡೆಯಬಹುದು. ಕೊಂಡ ನಂತರ ಕೆಲವು ಸರಳ ಪರೀಕ್ಷೆಗಳಿಂದ ಅವು ನಕಲಿಯೇ ಅಥವಾ ಕಲಬೆರಕೆಯಾಗಿದೆಯೇ ಎಂಬುದನ್ನು ಪತ್ತೆ ಹಚ್ಚಬಹುದು.

ಪರೀಕ್ಷೆ ಮಾಡುವುದು ಹೇಗೆ?

ಭೌತಿಕ ಪರೀಕ್ಷೆ

ಹರಳು ರೂಪದ ರಸಗೊಬ್ಬರಗಳು ಒಂದೇ ಬಣ್ಣ, ಆಕಾರ, ಗಾತ್ರದಿಂದ ಕೂಡಿದ್ದು ಕಣ್ಣಿಗೆ ಕಾಣುವಂತಹ ಇತರೆ ಪದಾರ್ಥಗಳು ಇರಬಾರದು. ಹೆಚ್ಚು ಪುಡಿ ಮತ್ತು ಹೆಚ್ಚಿನ ತೇವಾಂಶ ಹೊಂದಿರಬಾರದು. ಹರಳು ರೂಪದ ರಂಜಕ ಗೊಬ್ಬರ ಮತ್ತು ಜಿಪ್ಪಂ ಹರಳುಗಳು ಮೃದುವಾಗಿದ್ದು ಬೇರೆ ರಸಗೊಬ್ಬರದ ಹರಳುಗಳು ಗಟ್ಟಿಯಾಗಿರುತ್ತವೆ.
ನೀರಿನಲ್ಲಿ ಕರಗುವ ಪರೀಕ್ಷೆ

ಕೆಲವು ರಸಗೊಬ್ಬರಗಳು (ಯೂರಿಯ, ಅಮೋನಿಯಂ ಸಲ್ವೇಟ್, ಅಮೋನಿಯಂ ಕ್ಲೋರೈಡ್, ಮ್ಯೂರಿಯೇಟ್ ಆಫ್ ಪೊಟ್ಯಾಷ್, ಕ್ಯಾಲ್ಸಿಯಂ ಅಮೋನಿಯಂ ನೈಟ್ರೇಟ್) ನೀರಿನಲ್ಲಿ ಸಂಪೂರ್ಣ ಕರಗುತ್ತವೆ. ಅವನ್ನು ಪರೀಕ್ಷೆಗಾಗಿ ನೀರಿನಲ್ಲಿ ಹಾಕಿದಾಗ ಕರಗದೆ ಇರುವ ಪದಾರ್ಥ ಉಳಿದರೆ ಅದು ಕಲಬೆರಕೆ.

ಕೆಲವು ರಸಗೊಬ್ಬರಗಳು ನೀರಿನಲ್ಲಿ ಕರಗಿಸಿದಾಗ ತಣ್ಣನೆ ಅನುಭವ ನೀಡುತ್ತವೆ (ಯೂರಿಯ, ಅಮೋನಿಯಂ ಕ್ಲೋರೈಡ್, ಎಂಒಪಿ, ಸಿಎಎನ್, ನೈಟ್ರೋ ಫಾಸ್ಪೇಟ್ 20:20, 15:15:15, 19:19:19 ಇತ್ಯಾದಿ). ಹಾಗಿರದಿದ್ದಲ್ಲಿ ಅವು ಕಲಬೆರಕೆಯಾಗಿರುವ ಸಾಧ್ಯತೆಗಳಿರುತ್ತವೆ.

ಬಸಿ ಮಾಡುವ ಪರೀಕ್ಷೆ

ಯೂರಿಯವನ್ನು ಬಿಸಿ ಮಾಡಿದಾಗ ಸಂಪೂರ್ಣವಾಗಿ ಕರಗುತ್ತದೆ. ಕರಗದೇ ಇರುವ ವಸ್ತುಗಳು ಉಳಿದರೆ ಕಲಬೆರಕೆಯಾಗಿದೆ ಎಂದು ತಿಳಿಯಬೇಕು. ಡಿಎಪಿಯನ್ನು ಒಂದು ತಗಡಿನ ಮೇಲೆ ಬಿಸಿ ಮಾಡಿದಾಗ ಹರಳುಗಳು ಸುಣ್ಣದಂತೆ ಅರಳುತ್ತವೆ ಮತ್ತು ತಳಕ್ಕೆ ಅಂಟಿಕೊಳ್ಳುತ್ತವೆ. ಇದಿಲ್ಲದಿದ್ದರೆ

Also read: ಶಿವಮೊಗ್ಗ | ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಕುವೆಂಪು, ರಾಮಾನುಜನ್ ಜನ್ಮದಿನ ಆಚರಣೆ

ಪೋಷಕಾಂಶಗಳ ಪರೀಕ್ಷೆ

ಸಾರಜನಕದ ಪರೀಕ್ಷೆ: ಅಮೋನಿಯ ರೂಪದ ಸಾರಜನಕವಿರುವ ರಸಗೊಬ್ಬರಗಳನ್ನು ತೇವ ಮಾಡಿ ಸುಟ್ಟ ಸುಣ್ಣದಿಂದ ತೀಡಿದಾಗ ಅಮೋನಿಯ ಘಾಟು ವಾಸನೆ ಬರುತ್ತದೆ. ಅದು ಬರದಿದ್ದರೆ ನಕಲಿ ಎಂದು ತಿಳಿಯಬಹುದು. ಹೀಗೆ 30 ರಸಗೊಬ್ಬರಗಳ ಪರೀಕ್ಷೆ ಮಾಡಬಹುದು.

ರಂಜಕದ ಪರೀಕ್ಷೆ 

ಸ್ವಲ್ಪ ರಸಗೊಬ್ಬರವನ್ನು ನೀರಿನಲ್ಲಿ ಕರಗಿಸಿ. ಸೂಪರ್ ಫಾಸ್ಪೇಟ್ ಮತ್ತು ಡಿಎಪಿ ರಸಗೊಬ್ಬರಗಳಾದಲ್ಲಿ ಸಿಲ್ವ‌ರ್ ನೈಟ್ರೇಟ್ ದ್ರಾವಣ, ಇತರೆ ಸಾರಜನಕ, ರಂಜಕ ಮತ್ತು ಸಾರಜನಕ, ರಂಜಕ ಹಾಗೂ ಪೊಟ್ಯಾಷ್ ರಸಗೊಬ್ಬರಗಳಿಗೆ ಫೆರಿ ಕ್ಲೋರೈಡ್ ದ್ರಾವಣ ಹಾಕಿದಾಗ ಹಳದಿ, ಬಿಳಿ ಮಿಶ್ರಿತ ಹಳದಿ ಬಣ್ಣ ಬರಬೇಕು.

ಪೊಟ್ಯಾಷ್ ಪರೀಕ್ಷೆ: ಪೊಟ್ಯಾಷ್ ಅಂಶವನ್ನು ಕೋಬಾಲ್ಟ್ ನೈಟ್ರೇಟ್ ದ್ರಾವಣದಿಂದ ಕಂಡು ಹಿಡಿಯಬಹುದು. ನಕಲಿ ಗೊಬ್ಬರ ಕೊಬಾಲ್ಟ್ ನೈಟ್ರೇಟ್‌ನೊಂದಿಗೆ ಬೆರೆತರೂ ಹಳದಿ ಬಣ್ಣವನ್ನು ಕೊಡುವುದಿಲ್ಲ ಎಂಬ ಮಾಹಿತಿಯನ್ನು ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ನೀಡಲಾಯಿತು. ಊರಿನ ರೈತರೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದರ ಉಪಯೋಗ ಪಡೆದುಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಕುವೆಂಪು, ರಾಮಾನುಜನ್ ಜನ್ಮದಿನ ಆಚರಣೆ

Next Post

ವಿಭಿನ್ನತೆ ತಾರತಮ್ಯವಲ್ಲ; ಏಕರೂಪತೆ ಏಕಾತ್ಮತೆಯಲ್ಲ

kalpa News

kalpa News

Next Post
ವಿಭಿನ್ನತೆ ತಾರತಮ್ಯವಲ್ಲ; ಏಕರೂಪತೆ ಏಕಾತ್ಮತೆಯಲ್ಲ

ವಿಭಿನ್ನತೆ ತಾರತಮ್ಯವಲ್ಲ; ಏಕರೂಪತೆ ಏಕಾತ್ಮತೆಯಲ್ಲ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL